ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಪಟ್ಟಣದ ಸಾಯಿ ನಗರದಲ್ಲಿ ಚಾಕು ಇರಿದು ಯುವಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಮೃತನನ್ನು ನವೀನ್ ಕುಮಾರ್ (22) ಎಂದು ಗುರುತಿಸಲಾಗಿದೆ. ಸದ್ಯ ನವೀsನ್ ಮೃತದೇಹವನ್ನು ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು ಆಸ್ಪತ್ರೆ ಮುಂಭಾಗ ಸಿಆರ್ಪಿಎಫ್ ತುಕಡಿ ನಿಯೋಜಿಸಲಾಗಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ಭದ್ರಾವತಿಯಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ನವೀನ್ ಬೆನ್ನಿಗೆ ಎರಡು ಕಡೆ ಚಾಕುವಿನಿಂದ ಇರಿದ ದುಷ್ಕರ್ಮಿಗಳು ಅಲ್ಲಿಂದ ಪರಾರಿಯಾಗಿದ್ದಾರೆ.
ಸಾದತ್, ಸುಹೇಲ್ ಅಲಿಯಾಸ್ ಕೊಲವೇರಿ, ಇತರರು ಸೇರಿ ನವೀನ್ ಮೇಲೆ ಚೂರಿಯಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹೊಸಮನೆ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ.