ಬೆಳಗಾವಿ :ಹಿರಿಯ ಕಾಂಗ್ರೆಸ್ ನಾಯಕ ಹಾಗೂ ರಾಜ್ಯ ಮಾಜಿ ಸಚಿವ ಡಿ.ಬಿ. ಇನಾಮದಾರ್ ಮಂಗಳವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಬಹು ಖಾಯಿಲೆಯಿಂದ ಬಳಲುತ್ತಿದ್ದ 74 ವರ್ಷ ವಯಸ್ಸಿನ ದಾನಪ್ಪಗೌಡ ಬಸನಗೌಡ ಇನಾಮದಾರ ಶ್ವಾಸಕೋಶ ಹಾಗೂ ಯಕೃತ್ತಿನ ಕಾಯಿಲೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು.
ಕಿತ್ತೂರು ವಿಧಾನಸಭಾ ಕ್ಷೇತ್ರವನ್ನು ಹಲವು ಬಾರಿ ಪ್ರತಿನಿಧಿಸಿದ್ದ ಅವರು ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿಯೂ ಕೆಲಸ ಮಾಡಿದ್ದಾರೆ. ಇನಾಮದಾರ ಅವರು ಮುಂಬರುವ ವಿಧಾನಸಭಾ ಚುನಾವಣೆಗೆ ಕಿತ್ತೂರು ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಪಕ್ಷ ಕೊನೆ ಗಳಿಗೆಯಲ್ಲಿ ಅವರಿಗೆ ಟಿಕೆಟ್ ನಿರಾಕರಿಸಿತ್ತು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿಧನಕ್ಕೆ ಸಂತಾಪ ಸೂಚಿಸಿ, ಅವರ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ಅವರ ಬೆಂಬಲಿಗರಿಗೆ ಮತ್ತು ಕುಟುಂಬಕ್ಕೆ ದೇವರು ನೀಡಲಿ ಎಂದು ಹೇಳಿದರು