2022 – 23 ನೇ ಸಾಲಿನ ಕರ್ನಾಟಕ ಬೋರ್ಡ್ ಹತ್ತನೇ ತರಗತಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಮೇ ತಿಂಗಳ 2ನೇ ವಾರದಲ್ಲಿ ಪ್ರಕಟ ಗೊಳ್ಳುವ ನಿರೀಕ್ಷೆಯಿದೆ ಮತ್ತು ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ದ್ವಿತೀಯ ಪಿಯುಸಿ ಫಲಿತಾಂಶ ನೀಡಿದ ಮಾದರಿಯಲ್ಲೇ ನೀಡಲಾಗುವುದು.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ’ಯ ಶಿಕ್ಷಕರು ಈಗಾಗಲೆ ಮೌಲ್ಯಮಾಪನ ಆರಂಭಿಸಿದ್ದಾರೆ. ಇನ್ನೂ ಮೇ ತಿಂಗಳಿನಲ್ಲಿ ವಿಧಾನಸಭೆ ಚುನಾವಣೆ ಕೂಡ ನಡೆಯಲಿದ್ದು, ಚುನಾವಣೆ ಪ್ರಕ್ರಿಯೆಗೆ ಯಾವುದೇ ತೊಂದರೆಯಾಗದಂತೆ ಫಲಿತಾಂಶ ಬಿಡುಗಡೆ ಮಾಡಲು ಮಂಡಲಿ ಕಾರ್ಯ ರೂಪಿಸಿದೆ.
ಮಂಡಲಿ ಕಳೆದ ವಾರ ಎಸ್ಎಸ್ಎಲ್ಸಿ ಪರೀಕ್ಷೆಯ ಕೀ ಉತ್ತರಗಳ ಬಿಡುಗಡೆ ಮಾಡಿ, ಆಕ್ಷೇಪಣೆಯನ್ನು ಸಲ್ಲಿಸಲು ಅವಕಾಶ ನೀಡಿತ್ತು. ಆನ್ಲೈನ್ ಮೂಲಕ ಈ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿತ್ತು.
2022-23ನೇ ಸಾಲಿನ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಗೆ 8.69 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಒಟ್ಟು 236 ಕೇಂದ್ರಗಳಲ್ಲಿ 8.42 ಲಕ್ಷ ವಿದ್ಯಾರ್ಥಿಗಳ 50 ಲಕ್ಷಕ್ಕೂ ಹೆಚ್ಚು ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆ ನಿನ್ನೆಯಿಂದ ಪ್ರಾರಂಭಗೊಂಡಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಮಾಹಿತಿ ನೀಡಿದೆ