ಬೆಂಗಳೂರು: ಪಿಯುಸಿ ಪೂರಕ ಪರೀಕ್ಷೆ ತೆಗೆದುಕೊಳ್ಳೋರೂ ಸಿಇಟಿ ಬರೆಯಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೇಳಿದೆ. ದ್ವಿತೀಯ ಪಿಯುಸಿಯಲ್ಲಿ ನಿರೀಕ್ಷೆಗಿಂತ ಕಡಿಮೆ ಅಂಕ ಬಂದಿದೆ ಎಂಬ ಕಾರಣಕ್ಕಾಗಿ ಪೂರಕ ಪರೀಕ್ಷೆ ತೆಗೆದುಕೊಳ್ಳುತ್ತಿರುವ ವಿದ್ಯಾರ್ಥಿಗಳು ಕೂಡ ಮೇ 20 ಮತ್ತು 21ರಂದು ನಡೆಯಲಿರುವ ಸಿಇಟಿ ಪರೀಕ್ಷೆಗೆ ಹಾಜರಾಗಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ.
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳು ಮೇ ತಿಂಗಳಲ್ಲಿ ನಡೆಯುವ ಪೂರಕ ಪರೀಕ್ಷೆಗೆ ಈಗಿನಿಂದಲೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷ ಆರ್.ರಾಮಚಂದ್ರನ್ ತಿಳಿಸಿದರು.