ಧಾರವಾಡ: ಕಾಂಗ್ರೆಸ್ ಪಕ್ಷ ಎಸ್ಡಿಪಿಐ, ಪಿಎಫ್ಐ ಕಪಿಮುಷ್ಟಿಯಲ್ಲಿದ್ದು, ಅದರಿಂದ ಹೊರಬರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದರು.
ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಮತ್ತೊಬ್ಬರ ಭಾವನೆಗಳಿಗೆ ಧಕ್ಕೆ ಬರುವ ರೀತಿಯಲ್ಲಿ ಕಾಂಗ್ರೆಸ್ ವರ್ತಿಸುತ್ತಿದೆ. ಅವರ ಒತ್ತಡಕ್ಕೆ ಮಣಿಯುತ್ತಿದ್ದಾರೆ. ನಾವು ಎಸ್ಡಿಪಿಐ, ಪಿಎಫ್ಐ ವಿರುದ್ಧ ಮಾತನಾಡಿದರೆ ಕಾಂಗ್ರೆಸ್ ನಾಯಕರಿಗೆ ತಳಮಳ ಶುರುವಾಗುತ್ತದೆ. ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ. ಪಿಎಫ್ಐ ಬ್ಯಾನ್ ಆಗಿದ್ದರೂ ತಮ್ಮ ಪರವಾಗಿ ಮಾತನಾಡುತ್ತಿಲ್ಲ ಎಂಬ ಅಸಮಾಧಾನ ಪಿಎಪಿಐಗಿದೆ. ನಮಗೆ ರಕ್ಷಣೆ ಕೊಡುತ್ತಿಲ್ಲ. ನಾವು ಯಾಕೆ ನಿಮಗೆ ರಕ್ಷಣೆ ಕೊಡಬೇಕು ಅಂತ ಪಿಎಫ್ಐ ನಾಯಕರು ಪ್ರಶ್ನಿಸುತ್ತಿದ್ದಾರೆ ಎಂದರು.
ಪಿಎಫ್ಐನ ಇನ್ನೊಂದು ರೂಪ ಎಸ್.ಡಿ.ಪಿ.ಐ ಹಾಗೂ ಅದರ ಬೆಂಬಲವನ್ನು ಕಾಂಗ್ರೆಸ್ ಬಹಿರಂಗವಾಗಿ ಕೇಳಿತ್ತು. ಆದರೆ ಅವರು ಕೊಡುವುದಿಲ್ಲ ಎಂದಿದ್ದಾರೆ. ಕಾಂಗ್ರೆಸ್ನ ಕಾಲದಲ್ಲಿ ಎಸ್ಡಿಪಿ.ಐ, ಪಿ.ಎಫ್ಐ ಪ್ರಬಲವಾಗಿ ಬೆಳೆದಿದ್ದವು. ಬಾಲವೇ ದೇಹವನ್ನು ಅಲುಗಾಡಿಸುವ ಸ್ಥಿತಿ ಇದೆ. ಎಸ್.ಡಿ.ಪಿ.ಐ ಬಿಜೆಪಿಯ ಬಿ ಟೀಂ ಅಲ್ಲ. ಬಿಟೀಂ ಆಗಿದ್ದರೆ ನಾವು ಪಿಎಫ್ಐ ಬ್ಯಾನ್ ಮಾಡ್ತಿದ್ದೆವಾ..? ತಾವು ಮಾಡಿದ ತಪ್ಪನ್ನು ಮುಚ್ಚಲು ಈ ರೀತಿಯ ಆರೋಪ ಮಾಡುತ್ತಿದ್ದಾರೆ ಎಂದರು.
ಭಜರ0ಗ ದಳಕ್ಕೆ ಆಂಜನೇಯನಿಗೆ ಏನು ಸಂಬAಧ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿ, ರಾಮನಿಗೂ ಹನುಮನಿಗೂ ಏನು ಸಂಬAಧ ಇದೆಯೋ ಅದೇ ಸಂಬAಧ. ಆಂಜನೇಯನಿಗೂ ಭಜರಂಗ ದಳಕ್ಕಿದೆ. ಇದನ್ನು ಕಾಂಗ್ರೆಸ್ನವರು ಅರ್ಥ ಮಾಡಿಕೊಳ್ಳಬೇಕು. ಜನರ ಭಾವನೆಗಳ ಧಕ್ಕೆ ಬರೋ ರೀತಿಯಲ್ಲಿ ಮಾತನಾಡೋದು ಸರಿಯಲ್ಲ ಎಂದರು.
ನಾವು ನಮ್ಮ ಕಾರ್ಯಕ್ರಮಗಳ ಆಧಾರದಲ್ಲಿ ಚುನಾವಣೆ ಎದುರಿಸಿತ್ತಿದ್ದೇವೆ. ಕಾಂಗ್ರೆಸ್ ಅವರು ಭರವಸೆಗಳ ಮೇಲೆ ಚುನಾವಣೆ ಎದುರಿಸುತ್ತಿದ್ದಾರೆ. ಅನವಶ್ಯಕವಾಗಿ ಕೆದಕಿ ಕೆದಕಿ ಚುನಾವಣೆಯ ವಾತಾವರಣವನ್ನು ಜಾತಿ, ಧರ್ಮ, ಕೋಮು ಭಾವನೆಗಳ ಮೂಲಕ ಕೆರಳಿಸೋದು ಸರಿಯಲ್ಲ ಇದು ಕಾಂಗ್ರೆಸ್ನ ತುಷ್ಟೀಕರಣ ರಾಜಕಾರಣ ತೋರ್ಪಡಿಸುತ್ತೆ ಎಂದರು.
ಸೋನಿಯಾ ಗಾಂಧೀ ಬರಲಿ ನಾವು ಕಾಂಗ್ರೆಸ್ ನಾಯಕರ ರೀತಿ ಅಳೋಲ್ಲ. ಮೋದಿ, ಅಮಿತ್ ಶಾ ಯಾಕೆ ಬಂದರು ಎಂದು ಕಾಂಗ್ರೆಸ್ ನವರು ಕೇಳಿದಂತೆ ನಾವು ಕೇಳುವುದಿಲ್ಲ ಎಂದು ಹೇಳಿದರು.