ಇಂಪಾಲ: ಮಣಿಪುರದಲ್ಲಿ ಹಿಂಸಾಚಾರದ ಪರಿಣಾಮ ಸಾವಿನ ಸಂಖ್ಯೆ 54ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಲ್ಲಿನ ಬಹುತೇಕ ಅಂಗಡಿಗಳು, ಮಾಲ್ ಗಳು, ಮಾರುಕಟ್ಟೆಗಳು ತೆರೆದಿವೆ. ಆದರೆ ಜನ ಸಂಚಾರ ವಿರಳವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮೈತೇಯಿ ಸಮುದಾಯದವರು ತಮ್ಮನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ಎಂದು ಹೋರಾಟ ಮಾಡುತ್ತಿರುವುದು ಹಾಗೂ ಬುಡಕಟ್ಟು ಸಮುದಾಯಗಳನ್ನು ಅರಣ್ಯ ಪ್ರದೇಶಗಳಿಂದ ತೆರವು ಮಾಡಲು ಸರ್ಕಾರ ಈಚೆಗೆ ತೆಗೆದುಕೊಂಡಿರುವ ಕ್ರಮಗಳು ಈ ಸಂಘರ್ಷಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ.