ಕನ್ನಡದ ಖ್ಯಾತ ನಟಿ ರಾಧಿಕಾ ಕುಮಾರ ಸ್ವಾಮಿ ಇತ್ತೀಚಿಗೆ ಸಿನಿಮಾದಿಂದ ದೂರ ಉಳಿದಿದ್ದರು ಆದರೆ ಈಗ ಬಹುಭಾಷಾ ’ಅಜಾಗ್ರ” ಸಿನಿಮಾದ ಮೂಲಕ ಮತ್ತೆ ಸಿನಿಮಾ ಲೋಕಕ್ಕೆ ಮತ್ತೆ ಎಂಟ್ರಿಕೊಡುತ್ತಿದ್ದಾರೆ.
ಕನ್ನಡ ಸೇರಿದಂತೆ ಏಳು ಭಾಷೆಗಳಲ್ಲಿ ತೆರೆಕಾಣಲಿರುವ ’ಅಜಾಗ್ರ” ಸಿನಿಮಾದಲ್ಲಿ ರಾಧಿಕಾ ಕುಮಾರಸ್ವಾಮಿ ನಾಯಕಿಯಾಗಿ ನಟಿಸಲಿದ್ದು, ಬಾಲಿವುಡ್ ನಟ ಶ್ರೇಯಸ್ ತಲಪಾಡೆ ನಾಯಕನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಗೋಲ್ಮಾಲ್ ಹಾಗೂ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿರುವ ಶ್ರೇಯಸ್ ಅಜಾಗ್ರತ ಸಿನಿಮಾದ ಮೂಲಕ ಸ್ಯಾಂಡಲ್ವುಡ್ನತ್ತ ಹೆಜ್ಜೆ ಹಾಕಿದ್ದಾರೆ.
‘ಅಜಾಗ್ರತ’ ಚಿತ್ರದ ಮುಹೂರ್ತ ಸಮಾರಂಭ ಮೇ 13 ರಂದು ಹೈದರಾಬಾದ್ನ ರಾಮನಾಯ್ಡು ಸ್ಟುಡಿಯೋದಲ್ಲಿ ನಡೆಯಲಿದೆ. ರವಿರಾಜ್ ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದು, ಯುವ ನಿರ್ದೇಶಕ ಎಂ.ಶಶಿಧರ್ ನಿರ್ದೇಶಿಸುತ್ತಿದ್ದಾರೆ. ಅಶ್ವಿನಿ ರಾಮ್ ಪ್ರಸಾದ್ ಅವರ ಪುತ್ರ ಅರುಣ್ ರಾಮ್ ಪ್ರಸಾದ್ ಅಭಿನಯದ, ‘ಘಾರ್ಗ’ ಚಿತ್ರವನ್ನು ನಿರ್ದೇಶಿಸಿರುವ ಶಶಿಧರ್ ಅವರಿಗೆ ಇದು ಎರಡನೇ ಚಿತ್ರ.
ರಾಧಿಕಾ ತಮಗೆ ಬಂದ ಎಲ್ಲಾ ಸಿನಿಮಾಗಳನ್ನೂ ಒಪ್ಪಿಕೊಳ್ಳೊದಿಲ್ಲ. ತಮ್ಮ ಮನಸ್ಸಿಗೆ ಕಥೆ ಇಷ್ಟವಾದರೇ ಮಾತ್ರ ಒಪ್ಪಿಕೊಳ್ಳುತ್ತಾರೆ. ಸೈಕಾಲಜಿ ಕ್ರೈಂ ಥ್ರಿಲ್ಲರ್ ಸಿನಿಮಾ ಇದಾಗಿದ್ದು, ಕಥೆ ಮತ್ತು ಪಾತ್ರ ರಾಧಿಕಾಗೆ ತುಂಬಾ ಇಷ್ಟವಾಗಿದೆಯಂತೆ.
ಈ ಸಿನಿಮಾದಲ್ಲಿ ಕನ್ನಡ ಚಿತ್ರರಂಗದ ಸ್ಪರ್ಶ ರೇಖಾ, ದೇವರಾಜ್, ಸುಚೇಂದ್ರ ಪ್ರಸಾದ್, ವಿನಯ್ ಪ್ರಸಾದ್, ಚಿತ್ರ ಶೆಣೈ ಮುಂತಾದವರು ಕಾಣಿಸಿಕೊಳ್ಳಲಿದ್ದಾರೆ. ಹಾಗೆಯೇ ತೆಲುಗು ಚಿತ್ರರಂಗದ ರಾವ್ ರಮೇಶ್, ಪುಷ್ಪ ಸುನಿಲ್, ರಾಘವೇಂದ್ರ ಶ್ರವಣ್, ಕಾಲಿವುಡ್ನಿಂದ ಆದಿತ್ಯ ಮೆನನ್, ಸಮುದ್ರ ಕಣಿ, ಜಯ್ ಪ್ರಕಾಶ್ ನಟಿಸಲಿದ್ದಾರೆ.