ಯಾವುದೇ ಕಾಳುಗಳನ್ನು ಮೊಳಕೆ ಬರಿಸಿ ಸೇವಿಸುವುದರಿಂದ ದೇಹಕ್ಕೆ ಅನೇಕ ಪ್ರಯೋಜನಗಳು ಸಿಗುತ್ತವೆ. ಹಲವು ಅಧ್ಯಯನಗಳ ಪ್ರಕಾರ, ಮೊಳಕೆ ಕಾಳುಗಳು ಕ್ಯಾನ್ಸರ್ ನಿರೋಧಕ ಗುಣಲಕ್ಷಣಗಳನ್ನು ಹೊಂದಿದ್ದು, ಅವು ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ತಡೆಯುವ ಸಂಯುಕ್ತಗಳನ್ನು ಹೊಂದಿರುತ್ತವೆ ಎಂದು ಹೇಳಲಾಗಿದೆ. ಮೊಳಕೆ ಕಾಳುಗಳಿನಲ್ಲಿ ವಿಟಮಿನ್ ಸಿ, ವಿಟಮಿನ್ ಕೆ ಗಳು ಸಮೃದ್ಧವಾಗಿವೆ. ಹಾಗಾಗಿ, ಮೊಳಕೆ ಕಾಳುಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಆಗಿವೆ.
ಮೊಳಕೆ ಕಾಳುಗಳು ನೈಸರ್ಗಿಕವಾಗಿ ಕೊಬ್ಬನ್ನು ಕಡಿಮೆ ಮಾಡುವ ಆಹಾರವಾಗಿ, ಇದು ಹೃದಯದ ಆರೋಗ್ಯವನ್ನು ಬೆಂಬಲಿಸಲು ಮತ್ತು ಹೃದ್ರೋಗದ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಮೊಳಕೆಕಾಳು ಮತ್ತು ದಾಳಿಂಬೆ ಕಾಳುಗಳನ್ನು ಸೇರಿಸಿ ತಿನ್ನುವುದರಿಂದ ಆಹಾರದ ಫೈಬರ್ ಉತ್ತಮ ಮಟ್ಟದಲ್ಲಿರುತ್ತದೆ. ಇದು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಮೊಳಕೆ ಕಾಳುಗಳಲ್ಲಿ ವಿಟಮಿನ್ ಸಿ, ವಿಟಮಿನ್ ಎ, ವಿಟಮಿನ್ ಕೆ ಮತ್ತು ಕಬ್ಬಿಣವನ್ನು ಒಳಗೊಂಡಂತೆ ಜೀವಸತ್ವಗಳು ಮತ್ತು ಖನಿಜಗಳ ಉತ್ತಮ ಮೂಲವಾಗಿದ್ದರಿಂದ ಇದು ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಬಹಳ ಪರಿಣಾಮಕಾರಿ ಆಹಾರ ಎಂದು ಹೇಳಲಾಗಿದೆ.
ಫೈಬರ್ ಸಮೃದ್ಧವಾಗಿ ಇರುವುದರಿಂದ ಮೊಳಕೆ ಕಾಳುಗಳು ಒಟ್ಟಾರೆ ಕ್ಯಾಲೋರಿ ಸೇವನೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಫೈಬರ್ ಜೀರ್ಣಕ್ರಿಯೆಯನ್ನು ನಿಯಂತ್ರಿಸುತ್ತದೆ ಹಾಗಾಗಿ ಇದರ ಸೇವನೆ ತೂಕವನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ.