2023ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ನಾಳೆ ಪ್ರಕಟವಾಗಲಿದೆ.
ಮಾ. 31 ರಿಂದ ಫೆ.15ರವರೆಗೂ ಪರೀಕ್ಷೆ ನಡೆದಿತ್ತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಮುಕ್ತಾಯವಾಗಿದ್ದು, ನಾಳೆ ಮಾ.8ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.
ನಾಳೆ ಬೆಳಗ್ಗೆ ಗಂಟೆಗೆ ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಲಾಗುತ್ತದೆ.
ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಬೆಂಗಳೂರಿನಲ್ಲಿ ಬೃಹತ್ ರೋಡ್ ಶೋ ನಡೆಸಿದರು. ಟ್ರಿನಿಟಿ ಸರ್ಕಲ್ ನಲ್ಲಿ ರೋಡ್ ಶೋ ಮುಕ್ತಾಯಗೊಂಡ ಕೆಲವೇ ಗಂಟೆಗಳ ಅಂತರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಹೋಟೆಲ್ ತಲುಪಲು ಡೆಲಿವರಿ ಬಾಯ್ನ ಸ್ಖೂಟರ್ ನ ಹಿಂಬದಿಯಲ್ಲಿ ಪ್ರಯಾಣ ಮಾಡುವ ಮೂಲಕ ಮತದಾರರನ್ನು ಓಲೈಸುವ ಪ್ರಯತ್ನ ಮಾಡಿದ್ದಾರೆ.
ಮೇ.10ರಂದು ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ರಾಜ್ಯ ರಾಜಧಾನಿಯಲ್ಲಿ ಸಾರ್ವಜನಿಕ ಸಭೆಯಲ್ಲಿಗಳನ್ನು ನಡೆಸಲು ರಾಹುಲ್ ಗಾಂಧಿ, ಸ್ಕೂಟರ್ ನಲ್ಲಿ ಸುಮಾರು 2 ಕಿ.ಮೀ. ಸವಾರಿ ಮಾಡಿದ್ದಾರೆ.
ತೆಲಂಗಾಣದಲ್ಲಿ ಭಾನುವಾರ ನಕ್ಸಲ್ ಎನ್ಕೌಂಟರ್ ನಡೆದಿದ್ದು, ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಇಬ್ಬರು ಮಾವೋವಾದಿಗಳ ಹೊಡೆದುರುಳಿಸಿದೆ.
ಛತ್ತೀಸಗಡಕ್ಕೆ ಹೊಂದಿಕೊಂಡಿರುವ ತೆಲಂಗಾಣದ ಗಡಿ ಜಿಲ್ಲೆಯಾಗಿರುವ ಭದ್ರಾದ್ರಿ ಕೊತ್ತಾಗುಡಂ ಜಿಲ್ಲೆಯ ಅರಣ್ಯದಲ್ಲಿ ಭಾನುವಾರ ನಡೆದಿದೆ. ಗುಂಡಿನ ಚಕಮಕಿಯಲ್ಲಿ ನಿಷೇಧಿತ ಸಿಪಿಐ ಮಾವೋವಾದಿ ಸಂಘಟನೆಗೆ ಸೇರಿದ ಇಬ್ಬರು ನಕ್ಸಲರು ಹತ್ಯೆಯಾಗಿದೆ
ರಾಜ್ಯದಲ್ಲಿ ಆದಾಯ ತೆರಿಗೆ ಅಧಿಕಾರಿಗಳ ದಾಳಿ ಮುಂದುವರೆದಿದ್ದು, ಕರ್ನಾಟಕ ಮಾಜಿ ಸಿಎಂ ಎಸ್. ಎಂ. ಕೃಷ್ಣ ಅವರ ಸಂಬಂಧಿಕರ ಮನೆ ಸೇರಿದಂತೆ ಬೆಂಗಳೂರಿನ ಹಲವೆಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
2023ರ ವಿಧಾನಸಭಾ ಚುನಾವಣೆಗೆ ಇನ್ನು ಕೇವಲ ಮೂರೇ ದಿನ ಬಾಕಿ ಇರುವ ಹೊತ್ತಿನಲ್ಲಿ, ಐಟಿ ಅಧಿಕಾರಿಗಳು ಎಲ್ಲೆಡೆ ಹರಿದಾಡುತ್ತಿರುವ ಹಣದ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ.
ಇಂದು ಬೆಂಗಳೂರಿನ ಕೋರಮಂಗಲದ ನಿವಾಸಿಯಾಗಿರುವ ಎಸ್.ಎಂ.ಕೃಷ್ಣ ಸಹೋದರಿ ಎಸ್.ಎಂ. ಸುನೀತಾ ಅವರ ಮನೆ ಮೇಲೆ ಐಟಿ ದಾಳಿಯಾಗಿದ್ದು, ಬಾಗ್ಮನೆ ಹೆಸರಿನಲ್ಲಿರುವ ನಿವಾಸ ಹಾಗೂ ಬಾಗ್ಮನೆ ಬಿಲ್ಡರ್ ಕಚೇರಿಗಳ ಮೇಲೆಯೂ ದಾಳಿ ನಡೆಸಲಾಗಿದೆ.