ಉಡುಪಿ: ದ್ವಿಚಕ್ರವಾಹನಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಅಂಬಾಗಿಲಿನಿಂದ ಕಲ್ಸಂಕಕ್ಕೆ ಹೋಗುವ ರಸ್ತೆಯಲ್ಲಿ ನಡೆದಿದೆ.
ಮೃತರನ್ನು ಪುತ್ತೂರು ಗ್ರಾಮದ ಹನುಮಂತನಗರದ ನಿವಾಸಿ ರವಿಚಂದ್ರ ದೇವಾಡಿಗ (57) ಎಂದು ಗುರುತಿಸಲಾಗಿದೆ.
ಇವರು ಸ್ಕೂಟರ್ ನಲ್ಲಿ ಡಿವೈಡರ್ ಬಳಿ ತಿರುಗಿಸುತ್ತಿರುವಾಗ ಅದೇ ರಸ್ತೆಯಲ್ಲಿ ಹಿಂಬದಿಯಿಂದ ಬರುತ್ತಿದ್ದ ಮಾರುತಿ ಆಲ್ಟೋ ಕಾರು ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಅವರು ಮೃತಪಟ್ಟಿದ್ದಾರೆ.
ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ