ಭೋಪಾಲ್: ಬಸ್ಸು ಸೇತುವೆಯಿಂದ ಉರುಳಿಬಿದ್ದು ಕಾರಣಕ್ಕಾಗಿ 14 ಮಂದಿ ಪ್ರಯಾಣಿಕರು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ನಡೆದಿದೆ.
ಸುಮಾರು 70-80 ಪ್ರಯಾಣಿಕರಿದ್ದ ಬಸ್ಸು 50 ಅಡಿಯಿಂದ ಬಿದ್ದು ದೊಡ್ಡ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ 14 ಮಂದಿ ಮೃತಪಟ್ಟಿದ್ದಾರೆ . ಆದರೆ ನಿಖರವಾದ ಸಂಖ್ಯೆ ಇನ್ನೂ ತಿಳಿದುಬಂದಿಲ್ಲ ಎಂದು ಜಿಲ್ಲಾಧಿಕಾರಿ ಶಿವರಾಜ್ ಸಿಂಗ್ ಹೇಳಿದ್ದಾರೆ.
ಇಂದೋರ್ ಗೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದ್ದು ಬಸ್ ಚಾಲಕನ ನಿಯಂತ್ರಣ ತಪ್ಪಿ ಡೊಂಗರ್ಗಾಂವ್ ಪ್ರದೇಶದಲ್ಲಿ ಸೇತುವೆಯಿಂದ ಕೆಳಗೆ ಬಿದ್ದಿದೆ