IPL : ಆರ್ಸಿಬಿ ಮತ್ತು ಮುಂಬೈ ಎರಡೂ ತಂಡಗಳು ಸಹ 10 ಪಂದ್ಯಗಳಲ್ಲಿ 5ರಲ್ಲಿ ಗೆದ್ದು 5ರಲ್ಲಿ ಸೋತಿದೆ. ಹೀಗಾಗಿ ಇಂದಿನ ಪಂದ್ಯ ಗೆದ್ದವರು ಪ್ಲೇಆಫ್ಗೆ ಎಂಟ್ರಿ ಆಗುತ್ತಾರೆ.
ಇಂಡಿಯನ್ ಪ್ರೀಮಿಯರ್ ಲೀಗ್ 2023ರ 54ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ವಿರುದ್ಧ ಸೆಣಸಾಟ ನಡೆಯಲಿದೆ. ಈ ಪಂದ್ಯವು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ.
ಮುಂಬೈ ಮತ್ತು ಬೆಂಗಳೂರು ಪಂದ್ಯವು ಸಂಜೆ 7 ಗಂಟೆಗೆ ಟಾಸ್ ಮತ್ತು 7:30ಕ್ಕೆ ಪಂದ್ಯ ಆರಂಭವಾಗಲಿದೆ. ಮೊದಲ ಇನ್ನಿಂಗ್ಸ್ ಸ್ಕೋರ್ 170 ಕ್ಕಿಂತ ಹೆಚ್ಚು ರನ್ ಆಗಿದ್ದರೆ ಮೊದಲು ಬ್ಯಾಟಿಂಗ್ ಮಾಡಿದ ತಂಡವು ಇಲ್ಲಿ ಕೇವಲ 33% ಪಂದ್ಯಗಳನ್ನು ಗೆಲ್ಲಲಿದ್ದಾರೆ. ಹೀಗಾಗಿ ಇಂದು ಟಾಸ್ ಗೆದ್ದ ತಂಡ ಬೌಲಿಂಗ್ ಆಯ್ಕೆ ಮಾಡಬಹುದು. ಆರ್ಸಿಬಿ ಮತ್ತು ಮುಂಬೈ ತಂಡಗಳು ಐಪಿಎಲ್ನಲ್ಲಿ 33 ಪಂದ್ಯಗಳನ್ನು ಆಡಿದ್ದು, ಮುಂಬೈ 19 ಮತ್ತು ಆರ್ಸಿಬಿ 13 ಪಂದ್ಯಗಳನ್ನು ಗೆದ್ದಿದೆ. ಉಭಯ ತಂಡಗಳ ನಡುವೆ ಕಳೆದ 6 ಪಂದ್ಯಗಳಲ್ಲಿ ಆರ್ಸಿಬಿ 5 ಪಂದ್ಯಗಳನ್ನು ಗೆದ್ದಿದೆ. ಮುಂಬೈ ಐಪಿಎಲ್ 2020ರಲ್ಲಿ ಆರ್ಸಿಬಿ ವಿರುದ್ಧ ಕೊನೆಯ ಬಾರಿ ಜಯಗಳಿಸಿತ್ತು.
ಮುಂಬೈ ಮತ್ತು ಆರ್ಸಿಬಿ ಎರಡೂ ತಂಡಗಳು ಸಹ 10 ಪಂದ್ಯಗಳಲ್ಲಿ 5ರಲ್ಲಿ ಗೆದ್ದು 5ರಲ್ಲಿ ಸೋತಿದೆ. ಹೀಗಾಗಿ ಇಂದಿನ ಪಂದ್ಯ ಗೆದ್ದವರು ಪ್ಲೇಆಫ್ಗೆ ಸನಿಹವಾಗುತ್ತಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್ವೆಲ್, ಮಹಿಪಾಲ್ ಲೊಮ್ರೋರ್, ಅನುಜ್ ರಾವತ್, ಕೇದಾರ್ ಜಾಧವ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ವನಿಂದು ಹಸರಂಗ, ಕರ್ಣ್ ಶರ್ಮಾ, ಜೋಶ್ ಹ್ಯಾಜಲ್ವುಡ್, ಮೊಹಮ್ಮದ್ ಸಿರಾಜ್ ಆಡಲಿದ್ದಾರೆ.
ಮುಂಬೈ ಇಂಡಿಯನ್ಸ್: ಇಶಾನ್ ಕಿಶನ್, ರೋಹಿತ್ ಶರ್ಮಾ (ನಾಯಕ), ಸೂರ್ಯಕುಮಾರ್ ಯಾದವ್, ಕ್ಯಾಮೆರಾನ್ ಗ್ರೀನ್, ಟ್ರಿಸ್ಟಾನ್ ಸ್ಟಬ್ಸ್, ಟಿಮ್ ಡೇವಿಡ್, ನೆಹಾಲ್ ವಧೇರಾ, ಜೋಫ್ರಾ ಆರ್ಚರ್, ಪಿಯೂಷ್ ಚಾವ್ಲಾ, ಆಕಾಶ್ ಮಧ್ವಲ್, ಅರ್ಷದ್ ಖಾನ್ ಇಂದಿನ ತಂಡದಲ್ಲಿದ್ದಾರೆ.