ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ನಿನ್ನೆಯಿಂದಲೇ ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಮೇ 13 ರಂದು ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಅಲ್ಲಿವರೆಗೆ ಮದ್ಯ ಸಿಗುವುದು ಕಷ್ಟವಾಗಲಿದೆ.
ಮೇ 9, 10 ಮತ್ತು 13 ರ ಮಧ್ಯರಾತ್ರಿ ತನಕ ಮದ್ಯ ಮಾರಾಟ ಬಂದ್ ಆಗಲಿದ್ದು ಈ ಹಿನ್ನೆಲೆ ಮದ್ಯ ಪ್ರಿಯರು ಎರಡು ದಿನಕ್ಕೆ ಬೇಕಾಗುವ ಆಲ್ಕೋಹಾಲ್ ಸಂಗ್ರಹಿಸಿಟ್ಟುಕೊಂಡಿದ್ದಾರೆ. ಮದ್ಯ ಮಾರಾಟ ಬಂದ್ ಸುದ್ದಿಗಳು ಬಿತ್ತರವಾಗುತ್ತಿದ್ದಂತೆ ಎಚ್ಚೆತ್ತ ಗುಂಡೈಕ್ಳು ಸರತಿ ಸಾಲಿನಲ್ಲಿ ನಿಂತು ಮದ್ಯ ಖರೀದಿ ಮಾಡಿದ್ದಾರೆ.
ಇನ್ನು ರಾಜ್ಯದಲ್ಲಿ ಚುನಾವಣೆ ಘೋಷಣೆಯಾದಗಿನಿಂದ ಮದ್ಯ ಮಾರಾಟ ಹೆಚ್ಚಳವಾಗಿತ್ತು. ಕಳೆದ ಒಂದು ವಾರದಲ್ಲಿ ಅಬಕಾರಿ ಇಲಾಖೆ ಬೊಕ್ಕಸಕ್ಕೆ ಸಾವಿರಕ್ಕೂ ಅಧಿಕ ಕೋಟಿ ಅದಾಯ ಹರಿದು ಬಂದಿದೆ.
ಮೂರು ದಿನ ಡ್ರೈ ಡೇ ಹಿನ್ನೆಲೆ ಮದ್ಯವನ್ನು ದಾಸ್ತಾನು ಮಾಡಿಕೊಳ್ಳಲಾಗಿದೆ. ಒಂದೇ ವಾರದಲ್ಲಿ 1,200 ಕೋಟಿ ರೂಪಾಯಿ ಆದಾಯ ಸರ್ಕಾರದ ಬೊಕ್ಕಸಕ್ಕೆ ಸೇರ್ಪಡೆಯಾಗಿದೆ. ಚುನಾವಣೆ ಘೋಷಣೆ ಬಳಿಕ ನೂರು ಕೋಟಿಗೂ ಅಧಿಕ ಮೌಲ್ಯದ ಮದ್ಯ ಮಾರಾಟವಾಗಿದೆ.