ಹುಬ್ಬಳ್ಳಿ: ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಅವರು ಹುಬ್ಬಳ್ಳಿಯ ನಾಗಶೆಟ್ಟಿ ಕೊಪ್ಪದ ವಿವೇಕಾನಂದ ನಗರದ ರೋಟರಿ ಶಾಲೆಯಲ್ಲಿ ತಮ್ಮ ಕುಟುಂಬದ ಸದಸ್ಯರೊಂದಿಗೆ ಆಗಮಿಸಿ ಮತ ಚಲಾಯಿಸಿದರು.
ಪ್ರಜಾಪ್ರಭುತ್ವದ ಈ ಹಬ್ಬದಲ್ಲಿ ದೊಡ್ಡ ಪ್ರಮಾಣದಲ್ಲಿ ಜನರು ಭಾಗಿ ಆಗಿ ಪೂರ್ತಿ ಮೆಜಾರಿಟಿ ನನಗೆ ಸಿಕ್ಕಿದರೆ, ನಾನು ಕರ್ನಾಟಕವನ್ನು ನಂಬರ್ ಒನ್ ಮಾಡುತ್ತೇನೆ ಎಂದು ಮೋದಿಜಿಯವರು ಕರೆ ಕೊಟ್ಟಿದ್ದರು. ಅದಕ್ಕೆ ಪ್ರತಿಯಾಗಿ ಬೆಳಗೆ ಏಳು ಗಂಟೆಯಿಂದಲೇ ಉತ್ತಮ ಪ್ರತಿಕ್ರಿಯೆ ಸಿಗುತ್ತಿದ್ದು, ಇದು ನಮ್ಮ ಪಕ್ಷಕ್ಕೆ ಭಾರಿ ಬೆಂಬಲ ಸಿಕ್ಕಂತಿದೆ, ಇದರಂದ ಡಬಲ್ ಇಂಜಿನ್ ಸರ್ಕಾರ ಮತ್ತೆ ಬರಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಮಾಧ್ಯಮದೊಂದಿಗೆ ಅಭಿಪ್ರಾಯ ವ್ಯಕ್ತಪಡಿಸಿದರು.