ಬೆಂಗಳೂರು: ಟೀಂ ಇಂಡಿಯಾ ಆಟಗಾರ ಕೆ.ಎಲ್. ರಾಹುಲ್ ಅವರು ಯಶಸ್ವಿ ಶಸ್ತ್ರಚಿಕಿತ್ಸೆಗೊಳಗಾಗಿದ್ದಾರೆ. ಈ ಮೂಲಕ ಮುಂದಿನ ದಿನಗಳಲ್ಲಿನ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದಲ್ಲಿ ಆಡುವ ನಿರೀಕ್ಷೆ ಇದೆ.
ಈ ಬಗ್ಗೆ ಟ್ವಿಟರ್ ನಲ್ಲಿ ಬರೆದುಕೊಂಡಿರುವ ಅವರು, ನಾನು ಆರೋಗ್ಯವಾಗಿದ್ದೇನೆ. ಚಿಕಿತ್ಸೆ ನೀಡಿದ ವೈದ್ಯರು ಹಾಗೂ ಸಿಬ್ಬಂದಿಗೆ ಧನ್ಯವಾದ ಎಂದು ತಿಳಿಸಿದ್ದಾರೆ.
09.05.23 pic.twitter.com/r0CxIbhVfD
— K L Rahul (@klrahul) May 9, 2023
ಕಳೆದ ತಿಂಗಳು ಆರ್ ಸಿಬಿ ವಿರುದ್ಧ ಐಪಿಎಲ್ ಪಂದ್ಯದ ವೇಳೆ ರಾಹುಲ್ ಕಾಲಿಗೆ ಗಾಯಗೊಂಡಿದ್ದರು. ಅಲ್ಲದೆ ಇದರಿಂದ ಐಪಿಎಲ್ ನ ಹಲವು ಪಂದ್ಯಗಳಿಂದ ಹಾಗೆಯೇ ಇಂಗ್ಲೆಂಡ್ ನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ನಿಂದಲೂ ದೂರವಿರುವ ಸಾಧ್ಯತೆ ಇದೆ.