ಮಂಗಳೂರು: ಬುಧವಾರ ಮೂಡುಶೆಡ್ಡೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಒಟ್ಟು ಐದು ಪೊಲೀಸ್ ದೂರು ದಾಖಲಾಗಿದೆ.
ಕಾವೂರು ಪೊಲೀಸ್ ಠಾಣೆಯಲ್ಲಿ ಐದು ಎಫ್ ಐಆರ್ ದಾಖಲಾಗಿದ್ದು, 29ಕ್ಕೂ ಹೆಚ್ಚು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.
ಕಾಂಗ್ರೆಸ್ ಪಕ್ಷದ ಕಡೆಯಿಂದ ಒಂದು, ಬಿಜೆಪಿಯಿಂದ ಒಂದು ಹಾಗೂ ಮೂರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.