ಬೆಂಗಳೂರು: ಭಜರಂಗದಳ ನಿಷೇಧಕ್ಕೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಕೋರ್ಟ್ ಸಮನ್ಸ್ ನೀಡಿದೆ.
ಭಜರಂಗದಳ ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಅವರಿಗೆ ಪಂಜಾಬ್ ನ ಸಂಗ್ರೂರ್ ನ್ಯಾಯಾಲಯ ಸೋಮವಾರ ಸಮನ್ಸ್ ಜಾರಿ ಮಾಡಿದೆ. ಜುಲೈ 10 ರಂದು ಹಾಜರಾಗುವಂತೆ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ತನ್ನ ಯುವ ಘಟಕವಾದ ಭಜರಂಗದಳಕ್ಕೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಅಪಮಾನ ಮಾಡಲಾಗಿದೆ ಎಂದು ‘ವಿಎಚ್ ಪಿ’ ಆರೋಪಿಸಿದೆ. ವಿಶ್ವ ಹಿಂದೂ ಪರಿಷತ್ ನ ಚಂಡೀಗಡ ಘಟಕ ಮತ್ತು ಅದರ ಯುವ ಘಟಕ ಭಜರಂಗದಳ ಮೇ4ರಂದು ನೋಟಿಸ್ ಜಾರಿ ಮಾಡಿದ್ದು, 14 ದಿನಗಳ ಒಳಗೆ 100.10 ಕೋಟಿ ರೂ ಪರಿಹಾರ ನೀಡುವಂತೆ ಒತ್ತಾಯಿಸಿತ್ತು.