ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಕಳೆದ ವಾರ ಹೈಕೋರ್ಟ್ ಮುಂದೆ ಬಂಧಿಸಿ, ಸೆರೆಮನೆಯಲ್ಲಿ ಇಡಲಾಗಿತ್ತು, ನಂತರ ಈ ವಿಚಾರವಾಗಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಪಾಕಿಸ್ತಾನ ಸುಪ್ರೀಂ ಕೋರ್ಟ್ ಅವರನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಆದೇಶ ನೀಡಿತ್ತು. ಆದರೆ ಇದೀಗ ಇಮ್ರಾನ್ ಖಾನ್ ಅವರ ಮನೆಯಲ್ಲಿ ಉಗ್ರರು ಇದ್ದಾರೆ ಎಂದು ಪಾಕ್ ಸುದ್ದಿ ವರದಿ ಮಾಡಿದೆ.
ಇಮ್ರಾನ್ ಖಾನ್ ಅವರ ಲಾಹೋರ್ನಲ್ಲಿರುವ ಮನೆಯಲ್ಲಿ 30-40 ಜನ ಭಯೋತ್ಪಾದಕರು ಆಶ್ರಯ ಪಡೆಯುತ್ತಿದ್ದಾರೆ ಎಂದು ಅನುಮಾನ ಬಲವಾಗಿದೆ. ಇಮ್ರಾನ್ ಖಾನ್ ಅವರ ಪಕ್ಷವಾದ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಗೆ ಭಯೋತ್ಪಾದಕರನ್ನು ತಕ್ಷಣ ಒಪ್ಪಿಸುವಂತೆ ಪಾಕ್ ಪೊಲೀಸರು ಸೂಚನೆ ನೀಡಿದ್ದಾರೆ. 24 ಗಂಟೆಯೊಳಗೆ ನಮಗೆ ಅವರನ್ನು ಒಪ್ಪಿಸಬೇಕು ಎಂದು ಸೂಚಿಸಲಾಗಿದೆ.
ಲಾಹೋರ್ನ ಜಮಾನ್ ಪಾರ್ಕ್ನಲ್ಲಿರುವ ಇಮ್ರಾನ್ ಖಾನ್ ನಿವಾಸದಲ್ಲಿ ಉಗ್ರರು ಆಶ್ರಯ ಪಡೆದಿದ್ದಾರೆ. ಈಗಾಗಲೇ ಇಮ್ರಾನ್ ಖಾನ್ ಸಲ್ಲಿಸಿದ ಅರ್ಜಿಯ ಮೇಲಿನ ತೀರ್ಪನ್ನು ಲಾಹೋರ್ ಹೈಕೋರ್ಟ್ ಕಾಯ್ದಿರಿಸಲಾಗಿದೆ. ಅಲ್ ಖಾದಿರ್ ಟ್ರಸ್ಟ್ ಕೇಸ್ ಪ್ರಕರಣದಲ್ಲಿ ಬಂಧಿತರಾಗಿದ್ದಂದಿನಿಂದ ಅವರ ವಿರುದ್ಧ ದಾಖಲಾಗಿರುವ ಪ್ರತಿಯೊಂದು ಪ್ರಕರಣಕ್ಕೂ ಇದು ಅನ್ವಯವಾಗುತ್ತದೆ ಎಂದು ವರದಿ ಬಂದಿದೆ. ಭೂ ಹಗರಣ ಪ್ರಕರಣದಲ್ಲಿ ಖಾನ್ ಅವರ ಬಂಧನದ ನಂತರ ಪ್ರತಿಭಟನೆಗಳು ಹುಟ್ಟಿಕೊಂಡ ಹಿನ್ನೆಲೆಯಲ್ಲಿ, ಮಾಜಿ ಪ್ರಧಾನಿ ವಿರುದ್ಧ ಇತರ ಪ್ರಕರಣಗಳನ್ನು ಸಹ ದಾಖಲಿಸಲಾಗಿದೆ.