ರಾಮನಗರ: ನವೆಂಬರ್ ವೇಳೆಗೆ ರಾಜ್ಯ ರಾಜಕಾರಣದಲ್ಲಿ ಬಾರಿ ಬದಲಾವಣೆಗಳು ಆಗಲಿವೆ, ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ಮತದಾರರಿಗೆ ಕೃತಜ್ಞತಾ ಸಭೆ ನಡೆಸಿ ಮಾತನಾಡಿದ ಅವರು, ಬಹುಮತದ ಸರ್ಕಾರ ಬಂದಿದೆ ಎಂದು ಭಾವಿಸಬೇಡಿ. ಲೋಕಸಭಾ ಚುನಾವಣೆ ಬಳಿಕ ಏನು ಬೆಳವಣಿಗೆ ಆಗುತ್ತದೆ ಎಂದು ನೋಡೋಣ. ಈಗಿನ ರಾಜಕೀಯ ಬೆಳವಣಿಗೆ ಬಗ್ಗೆ ಯಾವುದೇ ಅಂಜಿಕೆ ಬೇಡ ಎಂದರು. ಬಿಜೆಪಿಯವರು ಲೂಟಿ ಮಾಡಿದ ರೀತಿಯಲ್ಲೆ ಕಾಂಗ್ರೆಸ್ ನವರು ಲೂಟಿಗೆ ಇಳಿಯಲಿದ್ದಾರೆ ಅದರಲ್ಲೇನು ಹೊಸತಿಲ್ಲ, ಯಾರನ್ನು ಎಲ್ಲಿ ಹಿಡಿಯಬೇಕೆಂದು ನನಗೆ ಚೆನ್ನಾಗಿ ತಿಳಿದಿದೆ. ನಾನು ಹೋರಾಟ ಮಾಡಲು ಸಿದ್ದನಿದ್ದೇನೆ, ಯಾವುದೇ ಕಾರಣಕ್ಕೂ ಈ ಸರ್ಕಾರದ ಮಂತ್ರಿಗಳ ಬಳಿ ಕೈ ಚಾಚುವುದಿಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಜನತೆಯನ್ನು ಉದ್ದೇಶಿಸಿ ಮಾತನಾಡಿದರು.
ಕಾಂಗ್ರೆಸ್ ಪಕ್ಷ ನೀಡಿರುವ ಗ್ಯಾರಂಟಿ ಅಂತ ಯಾವುದೆ ಯೋಜನೆಯನ್ನು ಜಾರಿಗೆ ತರುವುದು ಸುಲಭವಲ್ಲ. ಈ ಹಿಂದೆ ಜಾರಿಯಲ್ಲಿರುವ ಕಾರ್ಯಕ್ರಮಗಳೇ ಮುಂದುವರಿಯುವ ಅನುಮಾನವಿದೆ. ಅವರ ಯೋಜನೆಗಳಿಗೆ 60 ರಿಂದ 70 ಸಾವಿರ ಕೋಟಿ ರೂ. ಬೇಕು. ಅವರು ಎಲ್ಲಿಂದ ಅನುದಾನ ತರುತ್ತಾರೆ.ಯಾವುದೇ ಕಾರಣಕ್ಕೂ ನಿರೀಕ್ಷೆ ಇಟ್ಟುಕೊಳ್ಳಬೇಡಿ ಎಂದು ಕಾಂಗ್ರೆಸ್ ನ ವಿರುದ್ಧ ನುಡಿದರು.
ಜೆಡಿಎಸ್ ಈ ಬಾರಿ 60 ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಬೇಕಿತ್ತು. ಆದರೆ, ಕೆಲವರು ನಮ್ಮ ವಿರುದ್ಧ ನೀಡಿರುವ ಸುಳ್ಳು ಆರೋಪಗಳಿಂದ ಎರಡು ಮೂರು ಸಮಾಜದ ಮತಗಳು ನಮ್ಮ ಪಕ್ಷಕ್ಕೆ ಬರಲಿಲ್ಲ. ಜೆಡಿಎಸ್ ಬಿಜೆಪಿ ಜೊತೆ ಹೋಗುತ್ತದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದರು ಎಂದು ಬಿಜೆಪಿಯ ವಿರುದ್ಧ ಕಿಡಿ ಕಾಡಿದರು.
ಬಿಜೆಪಿ ರಾಷ್ಟ್ರೀಯ ನಾಯಕರು ಏನೇನು ಮಾಡಿದ್ದಾರೆ ಗೊತ್ತಿದೆ, ನಮ್ಮನ್ನು ಸೋಲಿಸಲು ಹೋಗಿ ಅವರೆ ಈಗ ಏನು ಮಾಡಲು ಸಾಧ್ಯವಾಗದೆ ಕೈಕಟ್ಟಿ ಕುಳಿತಿದ್ದಾರ. ಮುಂದಿನ ಸಲ ನಮ್ಮ ಪಕ್ಷ ಸ್ವತಂತ್ರವಾಗಿ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸೋಲಿನಲ್ಲಿಯು ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು