ಸಿದ್ದರಾಮಯ್ಯ ಸಚಿವ ಸಂಪುಟಕ್ಕೆ 24 ಜನ ಹೊಸ ಶಾಸಕರನ್ನು ಸೇರಿಸಿಕೊಳ್ಳುವ ಮೂಲಕ ಸಚಿವ ಸಂಪುಟ ವಿಸ್ತರಣಾಕಾರ್ಯ ಮುಕ್ತಾಯಗೊಂಡಿದೆ. ನೂತನ ಸಚಿವ ಸಚಿವರ ಆಯ್ಕೆ ಬೆನ್ನಲ್ಲೇ ಕಾಂಗ್ರೆಸ್ನಲ್ಲಿ ಅಸಮಾಧಾನ ಸ್ಪೋಟಗೊಂಡಿದೆ.
ಸಚಿವ ಸ್ಥಾನ ಕೈ ತಪ್ಪಿರುವುದರಿಂದ ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಸಿಟ್ಟಾಗಿದ್ದು, ರಾಜೀನಾಮೆಗೆ ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಿ.ಕೆ ಹರಿಪ್ರಸಾದ್ ಸಚಿವ ಸ್ಥಾನ ಸಿಗಲಿದೆ ಎಂಬ ನಿರೀಕ್ಷೆ ಇತ್ತು, ಸಾಮಾಜಿಕ ಜಾಲತಾಣಗಳಲ್ಲೂ ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂಬ ಒತ್ತಾಯ ಕೇಳಿಬಂದಿತ್ತು. ಕರಾವಳಿಯಲ್ಲಿ ಬಿಲ್ಲವ ಸಮುದಾಯ ದೊಡ್ಡ ಮಟ್ಟದಲ್ಲಿ ಇರುವುದಿಂದ ಈ ಭಾಗದವರಾಗಿರುವ ಬಿ.ಕೆ ಹರಿ ಪ್ರಸಾದ್ ಅವರಿಗೆ ಸಂಪುಟದಲ್ಲಿ ಸ್ಥಾನ ಸಿಗುವ ನಿರೀಕ್ಷೆಯಲ್ಲಿದ್ದರು. ಅದರಂತೆ ಮೊದಲ ಸಚಿವ ಸಂಪುಟ ರಚನೆಯಲ್ಲಿಯೇ ಸಿಗಲಿದೆ ಎಂಬ ಮಾತುಗಳು ಕೇಳಿ ಬಂದಿತ್ತು. ಆದರೆ ಮೊದಲ ಸಂಪು ರಚನೆಯಲ್ಲೂ ಸಚಿವ ಸ್ಥಾನ ಸಿಗಲಿಲ್ಲ, ಇನ್ನೂ ಇದೀಗ 24 ಜನ ಶಾಸಕರನ್ನು ಆಯ್ಕೆ ಮಾಡುವಾಗಲು ಅವರ ಹೆಸರನ್ನು ತೆಗೆದುಕೊಂಡಿಲ್ಲ. ಸಚಿವ ಸ್ಥಾನ ಕೈ ತಪ್ಪಿದ ಹಿನ್ನಲೆ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಕೊಡಲು ನಿರ್ಧಾರ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಕಾಂಗ್ರೆಸ್ ಹಿರಿಯರಿಗೆ ಕೈ ತಪ್ಪಿದ ಸಚಿವ ಸ್ಥಾನ:
ಆರ್.ವಿ ದೇಶಪಾಂಡೆ, ಟಿ.ಬಿ ಜಯಚಂದ್ರ, ಬಿ.ಕೆ ಹರಿಪ್ರಸಾದ್, ನಸೀರ್ ಅಹ್ಮದ್, ಲಕ್ಷ್ಮಣಸವದಿ, ಬಸವರಾಜ ರಾಯರೆಡ್ಡಿ, ವಿನಯ್ ಕುಲಕರ್ಣಿ, ವಿಯಯಾನಂದ ಕಾಶಪ್ಪನವರ್, ತನ್ವೀರ್ ಸೇಠ್ ಸೇರಿದಂತೆ ಕಾಂಗ್ರೆಸ್ ಹಿರಿಯರಿಗೆ ಶಾಸಕರಿಗೆ ಈ ಬಾರಿಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ಕೈತಪ್ಪಿದೆ. ಹಾಗೆಯೇ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಮುಖ್ಯ ಸಚೇತಕ ಪ್ರಕಾಶ್ ರಾಥೋಡ್ ಅವರಂತ ಹಲವರು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು, ಆದರೆ ಹಿರಿಯ ನಾಯಕರಲ್ಲಿ ಯಾರೊಬ್ಬರಿಗೂ ಸ್ಥಾನ ಸಿಗದ ಕಾರಣ ಕಾಂಗ್ರೆಸ್ ನಾಯಕರ ವಿರುದ್ಧ ಅಸಮಾಧಾನ ವ್ಯಕ್ತವಾಗಿದೆ.