ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಇನ್ಸ್ಟಾಗ್ರಾಮ್ನಲ್ಲಿ 25 ಕೋಟಿ ಫಾಲೋವರ್ಸ್ ಹೊಂದಿದ್ದು, ಏಷ್ಯಾದಲ್ಲೇ ಅತಿಹೆಚ್ಚು ಫಾಲೋವರ್ಸ್ ಹೊಂದಿದ ಮೊದಲ ವ್ಯಕ್ತಿ ಎನಿಸಿಕೊಂಡಿದ್ದಾರೆ.
ವಿಶ್ವದಲ್ಲೇ ಅತಿಹೆಚ್ಚು ಇನ್ಸ್ಟಾಗ್ರಾಮ್ ಫಾಲೋವರ್ಸ್ ಹೊಂದಿರುವ ಕ್ರೀಡಾಪಟುಗಳ ಪಟ್ಟಿಯಲ್ಲಿ ಖ್ಯಾತ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೋ ಹಾಗೂ ಲಿಯೋನೆಲ್ ಮೆಸ್ಸಿ ಬಳಿಕ 3ನೇ ಸ್ಥಾನದಲ್ಲಿ ವಿರಾಟ್ ಕೊಹ್ಲಿ ಪಡೆದುಕೊಂಡಿದ್ದಾರೆ.
ಈ ಹಿಂದೆ ಇನ್ಸ್ಟಾಗ್ರಾಮ್ನಲ್ಲಿ ಕೊಹ್ಲಿ 20 ಕೋಟಿ ಫಾಲೋವರ್ಸ್ ಹೊಂದಿದ್ದರು. ಈಗ 25 ಕೋಟಿ ಫಾಲೋವರ್ಸ್ ಹೊಂದಿದ್ದು ಈ ಸಾಧನೆಯನ್ನು ಮಾಡಿದ ಭಾರತದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ.
ಕ್ರಿಸ್ಟಿಯಾನೋ ರೊನಾಲ್ಡೊ 50 ಕೋಟಿ ಫಾಲೋವರ್ಸ್ ಹೊಂದಿದ್ದರೇ, ಲಿಯೋನೆಲ್ ಮೆಸ್ಸಿ 46.1 ಕೋಟಿ ಫಾಲೋವರ್ಸ್ ಹೊಂದಿದ್ದಾರೆ. ಹಾಗೆಯೇ ಗಾಯಕಿ ಸೆಲೆನಾ ಗೊಮೆಜ್ 418 ಮಿಲಿಯನ್ ಫಾಲೋವರ್ಸ್, ಉದ್ಯಮಿ ಮತ್ತು ರಿಯಾಲಿಟಿ ಟಿವಿ ತಾರೆ ಕೈಲಿ ಜೆನ್ನರ್ 391 ಮಿಲಿಯನ್ ಫಾಲೋವರ್ಸ್, ನಟ ಡ್ವೇನ್ ‘ದಿ ರಾಕ್’ ಜಾನ್ಸನ್ 381 ಮಿಲಿಯನ್ ಫಾಲೋವರ್ಸ್, ಗಾಯಕ ನಟಿ ಅರಿಯಾನಾ ಗ್ರಾಂಡೆ 371 ಫಾಲೋವರ್ಸ್ ಹೊಂದಿದ್ದಾರೆ.