ನಟ, ನಿರ್ಮಾಪಕ ಡಾಲಿ ಧನಂಜಯ್ ಪರಂವಃ ಸಿನಿಮಾದ ಹಾಡೊಂದನ್ನು ಬಿಡುಗಡೆ ಮಾಡಿದ್ದಾರೆ. ಈ ಹಾಡು ತಂದೆ-ಮಗನ ಬಾಂಧವ್ಯದ ಕತೆಯನ್ನು ಒಳಗೊಂಡಿದೆ. ಪರಂವಃ ಎಂಬುದು ರಕ್ಷಿತ್ ಶೆಟ್ಟಿಯ ನಿರ್ಮಾಣ ಸಂಸ್ಥೆಯ ಹೆಸರು. ಇದೀಗ ಇದೇ ಹೆಸರಿನ ಸಿನಿಮಾ ತೆರೆಗೆ ಬರಲು ರೆಡಿಯಾಗಿದೆ. ಈ ಸಿನಿಮಾಕ್ಕೆ ಕನ್ನಡದ ಮತ್ತೊಬ್ಬ ಜನಪ್ರಿಯ ನಟ, ನಿರ್ಮಾಪಕ ಡಾಲಿ ಧನಂಜಯ್ ಬೆಂಬಲ ನೀಡಿದ್ದಾರೆ. ಹೊಸ ಹುಡುಗರ ಈ ಪ್ರಯತ್ನಕ್ಕೆ ಡಾಲಿ ಪರೋಕ್ಷ ಬಂಬಲ ನೀಡಿದ್ದು, ಇತ್ತೀಚೆಗಷ್ಟೆ ಸಿನಿಮಾದ ಹಾಡೊಂದನ್ನು ಬಿಡುಗಡೆ ಮಾಡಿಸಿದ್ದಾರೆ.
ಮಕ್ಕಳ ಬೆಳವಣಿಗೆಯಲ್ಲಿ ತಾಯಿಯಷ್ಟೇ ತಂದೆಯ ಪಾತ್ರ ಕೂಡ ದೊಡ್ಡದು. ಇಂತಹ ತಂದೆ – ಮಗನ ಬಾಂಧವ್ಯದ ಕುರಿತಾದ ಕಥೆ ಹೊಂದಿರುವ ಚಿತ್ರ ‘ಪರಂವಃ’. ಸಂತೋಷ್ ಕೈದಾಳ ನಿರ್ದೇಶಿಸಿರುವ ಈ ಚಿತ್ರಕ್ಕಾಗಿ ನಾಗೇಶ್ ಕುಂದಾಪುರ, ಶ್ರೀ ತಲಗೇರಿ ಹಾಗೂ ಶಿವರಾಜ್ ಸೇರಿ ಬರೆದಿರುವ “ಭೂರಮೆಲಿ ಮತ್ಯಾರು” ಎಂಬ ತಂದೆ – ಮಗನ ಭಾವನಾತ್ಮಕ ಪಯಣಕ್ಕೆ ಮುನ್ನುಡಿಯಾಗಿರುವ ಈ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ. ಖ್ಯಾತ ಗಾಯಕ ರಾಜೇಶ್ ಕೃಷ್ಣನ್ ಅವರು ಇದನ್ನು ಹಾಡಿದ್ದಾರೆ. ನಟ ರಾಕ್ಷಸ ಡಾಲಿ ಧನಂಜಯ ಚಿತ್ರದ ಈ ಮೊದಲ ಹಾಡಿನ ವಿಡಿಯೋ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.
ಚಿತ್ರದ ನಾಯಕ ವೀರಗಾಸೆ ಕಲಾವಿದ. ಅವರ ಕುಟಂಬವೇ ವೀರಗಾಸೆ ಕುಟುಂಬ. ನಾಯಕನಿಗೆ ತಂದೆಯಂದರೆ ಪ್ರಾಣ. ತಂದೆಗೆ ಮಗನೇ ಜೀವ. ಇಂತಹ ವಿಭಿನ್ನ ಸ್ಟೋರಿ ಹೊಂದಿರುವ “ಪರಂವಃ” ಚಿತ್ರದ ಚಿತ್ರೀಕರಣ ಹಾಗೂ ನಂತರದ ಚಟುವಟಿಕೆಗಳು ಮುಕ್ತಾಯವಾಗಿದೆ. ಜುಲೈನಲ್ಲಿ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ ಎಂದು ನಿರ್ದೇಶಕ ಸಂತೋಷ್ ಕೈದಾಳ ಪ್ರೇಕ್ಷಕರಿಗೆ ತಿಳಿಸಿದ್ದಾರೆ.
ಡಾಲಿ ಧನಂಜಯ್ ತಮ್ಮ ಡಾಲಿ ಪಿಕ್ಚರ್ಸ್ ಮೂಲಕ ಹೊಸಬರಿಗೆ ಅವಕಾಶಗಳನ್ನು ನೀಡುತ್ತಿದ್ದಾರೆ. ಇತ್ತೀಚೆಗಷ್ಟೆ ಹೊಸ ಹುಡುಗರು ಮಾಡಿರುವ ಸಿನಿಮಾ ಡೇರ್ ಡೆವಿಲ್ ಮುಸ್ತಾಫಾಗೆ ಬೆಂಬಲವಾಗಿ ನೀಡಿ ಸಿನಿಮಾವನ್ನು ಗೆಲ್ಲಿಸಿದ್ದರು.
ಡಾಲಿ ಪಿಕ್ಚರ್ಸ್ ಮೂಲಕ ಕೇವಲ ಹೊಸ ನಿರ್ದೇಶಕರ, ಹೊಸ ನಟರ ಸಿನಿಮಾಗಳನ್ನಷ್ಟೆ ನಿರ್ಮಾಣ ಮಾಡುವ ಗುರಿಯನ್ನು ಸಹ ಡಾಲಿ ಧನಂಜಯ್ ಹೊಂದಿದ್ದಾರೆ. ಆ ಹಾದಿಯಲ್ಲಿ ಡಾಲಿ ಈಗಾಗಲೇ ಪ್ರಯತ್ನದ ಹಾದಿಯಲ್ಲಿದ್ದಾರೆ.