ಮಂಗಳೂರು: ಅರುಣ್ಯ ಫೌಂಡೇಶನ್ ಮತ್ತು ದಾಸ್ ಕುಡ್ಲ ಇವೆಂಟ್ಸ್ ಸಹಯೋಗದಲ್ಲಿ ಎಲ್ಲಾ ವಯೋಮಿತಿಯ ಸ್ಪರ್ಧಿಗಳನ್ನು ಹೊಂದಿರುವಂತಹ ಜಗತ್ತಿನ ಪ್ರಪ್ರಥಮ ಪ್ರಯೋಗ, ಕರಾವಳಿ ಕರ್ನಾಟಕ ಮೆಗಾ ಮ್ಯೂಸಿಕಲ್ ರಿಯಾಲಿಟಿ ಶೋ, ‘ಸಿಂಗರ್ಸ್ ಪ್ರೀಮಿಯರ್ ಲೀಗ್ (ಎಸ್ಪಿಎಲ್ 23): ಕರಾವಳಿ ಕೋಯಲ್ ಚಾಂಪಿಯನ್ಸ್ 2023’ ಕಾರ್ಯಕ್ರಮವು ಮೇ 31 ಮತ್ತು ಜೂನ್ 1 ರಂದು ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ.
ಜೂನ್ 1ರಂದು ಬೆಳಗ್ಗೆ 8.30ಕ್ಕೆ ಸೆಮಿಫೈನಲ್ ನಡೆಯಲಿದೆ. ಜೂ.1ರಂದು ಮಧ್ಯಾಹ್ನ 12.30ಕ್ಕೆ ಅಂತಿಮ ಸುತ್ತು ಹಾಗೂ ಸಂಜೆ, ಪ್ರಶಸ್ತಿ ಪ್ರದಾನ ಮತ್ತು ಬಹುಮಾನ ವಿತರಣಾ ಸಮಾರಂಭ ನಡೆಯಲಿದೆ. ಶ್ರೀಮತಿ. ಜಯಶ್ರೀ ಅಮರನಾಥ ಶೆಟ್ಟಿ ಅವರು ದೀಪಪ್ರಜ್ವಲನಗೊಳಿಸಿ ಉದ್ಘಾಟಿಸುವರು. ವಿಧಾನಸಭೆಯ ಅಧ್ಯಕ್ಷರಾಗಿರುವ ಮಾನ್ಯ ಯು. ಟಿ. ಖಾದರ್, ಮಂಗಳೂರಿನ ಮಹಾಪೌರರಾಗಿರುವ ಜಯಾನಂದ ಅಂಚನ್, ಸ್ಥಳೀಯ ಶಾಸಕರಾಗಿರುವ ಡಿ. ವೇದವ್ಯಾಸ್ ಕಾಮತ್, ಉಡುಪಿಯ ಶಾಸಕರಾಗಿರುವ ಯಶ್ ಪಾಲ್ ಸುವರ್ಣ, ಕಾಪು ಕ್ಷೇತ್ರದ ಶಾಸಕರಾಗಿರುವ ಸುರೇಶ್ ಶೆಟ್ಟಿ ಗುರ್ಮೆ, ಸಿನಿಮಾ ನಿರ್ಮಾಪಕ ಚಿನ್ನೇಗೌಡ, ನಟ ಸುಂದರ್ ರಾಜ್, ಹಿನ್ನೆಲೆ ಗಾಯಕಿ ವಾಣಿ ಹರಿಕೃಷ್ಣ, ಶ್ರೀ ಧನಲಕ್ಷ್ಮೀ ಗ್ರೂಪಿನ ಶ್ರೀಪತಿ ಭಟ್, ಗುರು ಬೆಳದಿಂಗಳು ಪ್ರತಿಷ್ಠಾನದ ಪದ್ಮರಾಜ್ ರಾಮಯ್ಯ, ಮೂಡ ಅಧ್ಯಕ್ಷ ರವಿಶಂಕರ್ ಮಿಜಾರ್, ಕಾರ್ಡೋಲೈಟ್ ಸ್ಪೆಷಾಲಿಟಿ ಕೆಮಿಕಲ್ಸ್ ಇಂಡಿಯಾದ ಜನರಲ್ ಮ್ಯಾನೇಜರ್ ದಿವಾಕರ್ ಬಿಜೈ, ರಾಜ್ಯ ಇಂಟಕ್ ಕಾರ್ಯಾಧ್ಯಕ್ಷರಾಗಿರುವ ರಾಕೇಶ್ ಮಲ್ಲಿ, ಶ್ರೀ ಸಾಯಿ ಮಂದಿರ ತೋಟದಮನೆಯ ದಿವಾಕರ ಶೆಟ್ಟಿ ಕೊಡವೂರು, ಇಂಡಸ್ಟ್ರಿಯಲ್ ಕ್ಯಾಟರರ್ಸ್ ಸಂಸ್ಥೆಯ ಪ್ರಭಾಕರ ಪೂಜಾರಿ, ನಿವೃತ್ತ ಎಸ್ಪಿ ಜಯಂತ್ ಶೆಟ್ಟಿ ಹಾಗೂ ಹಿರಿಯ ನ್ಯಾಯವಾದಿ ವರದರಾಜ್ ಎ., ಅಲೇರಿ ಶ್ರೀ ಸತ್ಯ ಸಾರಮಾನಿ – ಕಾನದ ಕಟದ ಮೂಲಕ್ಷೇತ್ರದ ಅಧ್ಯಕ್ಷರಾಗಿರುವ ಶಿವರಾಜ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಸಂಜೆ 4 ಗಂಟೆಯಿಂದ ಅಮೋಘ ‘ಪಂಚಭಾಷಾ ರಸಮಂಜರಿ’ ನಡೆಯಲಿದ್ದು, ಇದೇ ವೇದಿಕೆಯಲ್ಲಿ 46 ಗಣ್ಯರಿಗೆ ವಿವಿಧ ಪ್ರಶಸ್ತಿ ಪ್ರದಾನ ಹಾಗೂ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ನೆರವೇರಲಿದೆ. ಕಾರ್ಯಕ್ರಮದ ಅವಧಿಯಲ್ಲಿ ಅಂಗಾಂಗ ಹಾಗೂ ನೇತ್ರದಾನ ನೋಂದಣಿ ಶಿಬಿರವಿದ್ದು, ಆಸಕ್ತರು ನೋಂದಣಿ ಮಾಡಿಕೊಳ್ಳಬಹುದು.
ರಮೇಶ್ಚಂದ್ರ, ಮುಖ್ಯ ಸಂಯೋಜಕರು ವಿಕ್ರಮ್ ಕೆ., ಮ್ಯಾನೆಜಿಂಗ್ ಟ್ರಸ್ಟಿ, ಅರುಣ್ಯ ಫೌಂಡೇಶನ್, ಸದಾಶಿವದಾಸ್, ದಾಸ್ ಕುಡ್ಲ ಇವೆಂಟ್ಸ್ ಹಾಗೂ ನಾರಾಯಣರಾಜ್ ಕಾರ್ಯಕ್ರಮಕ್ಕೆ ಬೆನ್ನೆಲುಬಾಗಿ ನಿಂತಿದ್ದಾರೆ.
ಅರುಣ್ಯ ಫೌಂಡೇಶನ್ ಹಾಗೂ ದಾಸ್ ಕುಡ್ಲ ಇವೆಂಟ್ಸ್ ಬಗ್ಗೆ
ಅರುಣ್ಯ ಫೌಂಡೇಶನ್ ಕೃಷಿ, ಗ್ರಾಮೀಣಾಭಿವೃದ್ಧಿ, ಯುವಸಬಲೀಕರಣ, ಕಲೆ, ಸಂಸ್ಕೃತಿ, ಶಿಕ್ಷಣ, ಸಂಶೋಧನಾ ಕ್ಷೇತ್ರದಲ್ಲಿ ಗಣನೀಯ ಕೊಡುಗೆ ನೀಡುತ್ತಿದ್ದು, ಕಳೆದ 5 ವರ್ಷಗಳಿಂದ ಸಕ್ರೀಯವಾಗಿದೆ. ದಾಸ್ ಕುಡ್ಲ ಇವೆಂಟ್ಸ್ ರಾಜ್ಯದ ಸಂಗೀತ ಕಲಾವಿದರಿಗೆ ಪ್ರೊತ್ಸಾಹ, ಹಾಗೂ ವೇದಿಕೆಯನ್ನು ನೀಡುತ್ತಿದೆ. ಸುರ್ಸಂಗಮ್ ಆರ್ಕೆಸ್ಟ್ರಾ ಮೂಲಕ ಮಂಗಳೂರು ದಸರಾ ಆಚರಣೆಯಲ್ಲಿ ಸಾಂಸ್ಕೃತಿಕ ಉತ್ಸವವನ್ನು ಸತತವಾಗಿ ಆರು ವರ್ಷಗಳ ಕಾಲ ಆಯೋಜಿಸಿರುವುದು, ಕರಾವಳಿಯ ಸಂಗೀತ ಪ್ರಿಯರ ಮನಸ್ಸಿನಲ್ಲಿ ಗಾಢವಾದ ಛಾಪು ಮೂಡಿಸಿದೆ.