ಚಾಮರಾಜನಗರ: ಚಾಮರಾಜನಗರ ತಾಲೂಕಿನ ಭೋಗಾಪುರ ಗ್ರಾಮದ ಬಳಿ ವಿಮಾನ ಪತನಗೊಂಡಿರುವ ಘಟನೆ ನಡೆದಿದೆ.
ಇನ್ನು ವಿಮಾನದಲ್ಲಿ ಇಬ್ಬರು ಪೈಲಟ್ ಗಳು ಇದ್ದು ಅವರು ಪ್ಯಾರಚುಟ್ ಮೂಲಕ ಪಾರಾಗಿದ್ದಾರೆ.
ಇನ್ನೂ ಪತನವಾದ ವಿಮಾನವನ್ನು ನೋಡಲು ಅಕ್ಕ ಪಕ್ಕದ ಗ್ರಾಮಸ್ಥರು ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದರು.
ಈ ಘಟನೆಯು ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.