ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರ್ ಅವರ ಪುತ್ರ ಪವನ್ ಬಸ್ರೂರ್ ಕ್ಲಿಕ್ ಸಿನಿಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿಯನ್ನು ಕೊಟ್ಟಿದ್ದಾರೆ. ಐಟಿ ಉದ್ಯೋಗಿಯಾಗಿರುವ ಶಶಿಕಿರಣ್ ಶರಣ್ಯ ಫಿಲ್ಮಂಸ್ ಬ್ಯಾನರ್ ಅಡಿಯಲ್ಲಿ ಕ್ಲಿಕ್ ಸಿನಿಮಾ ನಿರ್ಮಾಣ ಮಾಡಿದ್ದು, ಶಶಿಕುಮಾರ್ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ.
ಕ್ಲಿಕ್ ಸಿನಿಮಾ ಶಿಕ್ಷಣ ವ್ಯವಸ್ಥೆಯನ್ನು ಆಧರಿಸಿದ್ದು, ಮನೆಯಲ್ಲಿ ನಿರ್ಲಕ್ಷ್ಯವನ್ನು ಎದುರಿಸುವ ಮಕ್ಕಳ ಮನಸ್ಥಿತಿ, ಅವರ ಶೈಕ್ಷಣಿಕ ಹೋರಾಟಗಳು ಮತ್ತು ಅದರಿಂದಾಗುವ ಅಭದ್ರತೆಗಳನ್ನು ಪರಿಶೋಧಿಸುವ ಕಥೆಯಾಗಿದೆ. ಸದ್ಯ ಚಿತ್ರ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ.
ಕ್ಲಿಕ್ ಸಿನಿಮಾಕ್ಕೆ ವಿಶ್ವಾಸ್ ಕೌಶಿಕ್ ಸಂಗೀತ ಸಂಯೋಜಿಸಿದ್ದು, ಆಕಾಶ್ ಪರ್ವ ಹಿನ್ನೆಲೆ ಸಂಗೀತವನ್ನು ನಿರ್ವಹಿಸಿದ್ದಾರೆ. ಜೀವನ್ ಗೌಡ ಛಾಯಾಗ್ರಹಣ, ವಿನಯ್ ಕುಮಾರ್ ಸಂಕಲನವಿದೆ. ಮಾಸ್ಟರ್ ಪವನ್ ಜೊತೆಯಲ್ಲಿ ಮತ್ತೊಬ್ಬ ಯುವ ನಟ ಕಾರ್ತಿಕ್ ಕೂಡ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ಇನ್ನುಳಿದಂತೆ ಚಂದ್ರಕಲಾ ಮೋಹನ್, ರಚನಾ ದಶರತ್, ಸಂಜು ಬಸಯ್ಯ, ಸಿಲ್ಲಿಲಲ್ಲಿ ಆನಂದ್, ಸುಮನ್ ಸೇರಿದಂತೆ ಹಲವರು ಈ ಸಿನಿಮಾದ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರ.
ಕ್ಲಿಕ್ ಸಿನಿಮಾದ ಚಿತ್ರೀಕರಣ ಈಗಾಗಲೇ ಬೆಂಗಳೂರು, ಬಿಡದಿ, ರಾಮನಗರ, ಕುಂದಾಪುರ ಸುತ್ತಮುತ್ತ ನಡೆಸಲಾಗಿದೆ. ಶೂಟಿಂಗ್ ಮುಗಿಸಿ, ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಕ್ಲಿಕ್ ಸಿನಿಮಾ ಶೀಘ್ರದಲ್ಲಿಯೇ ತೆರೆಗೆ ತರುಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ. ಸದ್ಯದಲ್ಲೇ ರಿಲೀಸ್ ಡೇಟ್ ಘೋಷಣೆ ಆಗಲಿದೆ.
ಉಗ್ರಂ, ಮಫ್ತಿ, ಕೆಜಿಎಫ್, ಕಬ್ಜ ಸೇರಿ ಸಾಕಷ್ಟು ಸೂಪರ್ ಹಿಟ್ ಸಿನಿಮಾಗಳಿಗೆ ಸಂಗೀತ ನೀಡಿರುವ ರವಿ ಬಸ್ರೂರು ಗಾಯಕರಾಗಿಯೂ, ನಿರ್ಮಾಪಕರಾಗಿಯೂ ಸ್ಯಾಂಡಲ್ವುಡ್ಗೆ ಜನಪ್ರಿಯತೆಯನ್ನು ಪಡೆದುಕೊಂಡಿದ್ದಾರೆ. ಇನ್ನೂ ಪರಭಾಷೆಯ ಚಿತ್ರಗಳಿಗೂ ಸಂಗೀತ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ