ಲಂಡನ್ ನ ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಐರ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಬ್ಯಾಟರ್ ಜೋ ರೂಟ್ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ.
ಇಂಗ್ಲೆಂಡ್ ಪರ ಟೆಸ್ಟ್ ಕ್ರಿಕೆಟ್ ನಲ್ಲಿ ಅರ್ಧಶತಕ ಬಾರಿಸುವ ಮೂಲಕ ಟೆಸ್ಟ್ ಕ್ರಿಕೆಟ್ ನಲ್ಲಿ 11 ಸಾವಿರ ರನ್ ಕಲೆ ಹಾಕಿದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಜೋ ಪಾತ್ರರಾಗಿದ್ದಾರೆ. ಕ್ರಿಕೆಟ್ ದಂತಕಥೆ ಬ್ರಿಯಾನ್ ಲಾರಾ ಅವರ ದಾಖಲೆಯನ್ನು ಜೋ ರೂಟ್ ಹಿಂದಿಕ್ಕಿದ್ದಾರೆ.
ಈ ಪಂದ್ಯದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಜೋ ರೂಟ್ 59 ಎಸೆತಗಳಲ್ಲಿ 56 ರನ್ ಗಳಿಸಿದ್ದಾರೆ. ಹೀಗೆ ಅರ್ಧ ಶತಕಗಳೊಂದಿಗೆ ಟೆಸ್ಟ್ ಕ್ರಿಕೆಟ್ ನಲ್ಲಿ ಜೋ ರೂಟ್ ಬರೋಬ್ಬರಿ 11 ಸಾವಿರ ರನ್ ಪೂರೈಸಿದ್ದಾರೆ. ಅಷ್ಟೇ ಅಲ್ಲದೇ ಅತೀ ಕಡಿಮೆ ಪಂದ್ಯಗಳಲ್ಲಿ 11 ಸಾವಿರ ರನ್ ಕಲೆ ಹಾಕುವ ಮೂಲಕ ವಿಶ್ವ ದಾಖಲೆ ನಿರ್ಮಿಸಿದ್ದಾರೆ.
ಈ ಹಿಂದೆ ವೆಸ್ಟ್ ಇಂಡೀಸ್ ನ ಮಾಜಿ ಆಟಗಾರ ಬ್ರಿಯಾನ್ ಲಾರಾ 131 ಪಂದ್ಯಗಳಲ್ಲಿ 11 ಸಾವಿರ ರನ್ ಗಳಿಸಿದ್ದರು, ಶ್ರೀಲಂಕಾದ ಕುಮಾರ ಸಂಗಾಕ್ಕರ 134 ಪಂದ್ಯಗಳಲ್ಲಿ 11 ಸಾವಿರ ರನ್ ಪಡೆದುಕೊಂಡು ಸಾಧನೆ ಮಾಡಿದ್ದರು. ಆದರೆ ಈಗ ಜೋ ರೂಟ್ ಇವರಿಬ್ಬರನ್ನು ಹಿಂದಿಕ್ಕಿ 130 ಪಂದ್ಯಗಳಲ್ಲಿ 11 ಸಾವಿರ ರನ್ ಕಲೆ ಹಾಕಿದ್ದಾರೆ.