ಬೆಂಗಳೂರು: ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆರಂಭಿಕ ಬ್ಯಾಟ್ಸ್ ಮನ್ ಋತುರಾಜ್ ಗಾಯಕ್ವಾಡ್ ಇಂದು ತಮ್ಮ ಬಹುಕಾಲದ ಗೆಳತಿ ಉತ್ಕರ್ಷ ಪವಾರ್ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಈ ಸಂಭ್ರಮದ ಘಳಿಗೆಯ ಫೋಟೋಗಳನ್ನು ಜಾಲತಾಣಗಳಲ್ಲಿ ಶೇರ್ ಮಾಡಿಕೊಂಡಿರುವ ಅವರು, From the pitch to the altar, our journey begins! ಎಂದು ಬರೆದುಕೊಂಡಿದ್ದಾರೆ.
ಉತ್ಕರ್ಷ ಪವರ್ ಕೂಡ ಕ್ರಿಕೆಟ್ ಆಟಗಾರ್ತಿಯಾಗಿದ್ದು, ಮಹಾರಾಷ್ಟ್ರ ಮಹಿಳಾ ಕ್ರಿಕೆಟ್ ತಂಡದ ಆಲ್ ರೌಂಡರ್ ಆಗಿದ್ದಾರೆ. ಈ ಕ್ರಿಕೆಟರ್ ಗಳಿಗೆ ಅನೇಕ ಗಣ್ಯರು ಶುಭ ಹಾರೈಸಿದ್ದಾರೆ.