ಬೆಂಗಳೂರು: ಇಂದು ನಡೆದ ನೆಟ್ ಪ್ರ್ಯಾಕ್ಟೀಸ್ ಮಾಡುವ ವೇಳೆ ಭಾರತ ತಂಡದ ನಾಯಕ ರೋಹಿತ್ ಶರ್ಮಾ ತಮ್ಮ ಎಡಗೈ ಹೆಬ್ಬೆರಳಿಗೆ ಗಾಯ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
ರೋಹಿತ್ ಶರ್ಮಾ ತಮ್ಮ ಎಡಗೈ ಗೆ ಗಾಯ ಮಾಡಿಕೊಂಡ ಬಳಿಕ ನಂತರ ವೈದ್ಯರಿಂದ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಇನ್ನು ಗಾಯ ಎಷ್ಟರ ಮಟ್ಟಿಗೆ ಆಗಿದೆ ಎಂಬುದರ ಬಗ್ಗೆ ಇನ್ನು ಮಾಹಿತಿ ಲಭ್ಯವಾಗಿಲ್ಲ. ಈ ನಿಟ್ಟಿನಲ್ಲಿ ಫೈನಲ್ ಪಂದ್ಯಕ್ಕೆ ರೋಹಿತ್ ಭಾಗವಹಿಸುವ ಬಗ್ಗೆ ಅಭಿಮಾನಿಗಳಲ್ಲಿ ಗೊಂದಲ ಸೃಷ್ಟಿಯಾಗಿದೆ.
ಜೂನ್ 7ರಿಂದ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯ ನಡೆಯಲಿದೆ. ಈ ಪಂದ್ಯ ಇಂಗ್ಲೆಂಡ್ನ ಓವಲ್ ಮೈದಾನದಲ್ಲಿ ನಡೆಯಲಿದೆ. ಪಂದ್ಯದ ಮೊದಲು ರೋಹಿತ್ ಶರ್ಮಾ ಮಾತನಾಡಿದ್ದು, ನಾನು ಈ ಚಾಂಪಿಯನ್ಶಿಪ್ ಗೆಲ್ಲಲು ಬಯಸುತ್ತೇನೆ ಎಂದು ಹೇಳಿದ್ದಾರೆ.