ನಟ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮೀಟೂ ಪ್ರಕರಣಕ್ಕೆ ಮತ್ತೆ ಮುನ್ನಲೆಗೆ ಬಂದಿದೆ. ಹಿರಿಯ ನಟ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಲೈಂಗಿಕ ಕಿರುಕುಳ ಆರೋಪ ಮಾಡಿ ಮೀಟೂ ಪ್ರಕರಣವನ್ನು ದಾಖಲಿಸಿದ್ದರು. ಮೂರು ವರ್ಷ ತನಿಖೆ ಮಾಡಿದ ಪೊಲೀಸರು ಮೀಟೂ ಆರೋಪಕ್ಕೆ ಅರ್ಜುನ್ ಸರ್ಜಾ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳು ಇಲ್ಲ ಎಂದು ಹೇಳಿ ಬಿ ರಿಪೋರ್ಟ್ ನೀಡಿದ್ದರು. ಇದನ್ನು ಶ್ರುತಿ ಹರಿಹರನ್ ಅವರು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರು. ಇದೀಗ ಸಂಬಂಧಿಸಿದಂತೆ ಸಾಕ್ಷ್ಯಾಧಾರ ಸಲ್ಲಿಸುವಂತೆ ನಟಿ ಶ್ರುತಿ ಹರಿಹರನ್ ಗೆ ಬೆಂಗಳೂರಿನ 8ನೇ ಎಸಿಎಂಎಂ ಕೋರ್ಟ್ ನೋಟಿಸ್ ನೀಡಿದೆ.
ಶ್ರುತಿ ಹರಹರನ್ ಅರ್ಜುನ್ ಸರ್ಜಾ ಪ್ರಕರಣ:
2018ರಲ್ಲಿ ಮೀ ಟೂ ಚಳುವಳಿ ಆರಂಭ ಆಗಿತ್ತು. ಅನೇಕ ನಟಿಯರು ಮೀಟೂ ಪ್ರಕರಣವನ್ನುದಾಖಲಿಸಿದ್ದರು. ಆ ಸಮಯದಲ್ಲಿ ಮಾಧ್ಯಮದ ಜೊತೆ ಮಾತನಾಡುತ್ತಾ ಶ್ರುತಿ ಹರಿಹರನ್ ಕೂಡ ತಮಗೂ ಲೈಂಗಿಕ ಕಿರುಕುಳ ಆಗಿತ್ತು ಎಂದಿದ್ದರು. ‘ವಿಸ್ಮಯ’ ಚಿತ್ರೀಕರಣದ ವೇಳೆ ಅರ್ಜುನ್ ಸರ್ಜಾ ಅವರು ತಮ್ಮ ಮೇಲೆ ಲೈಂಗಿಕ ಕಿರುಕುಳ ಮಾಡಿದ್ದರು ಎಂದು ಶ್ರುತಿ ಹರಿಹರನ್ ಆರೋಪ ಮಾಡಿದ್ದರು.
ಸಿನಿಮಾ ಶೂಟಿಂಗ್ ಹಾಗೂ ರಿಹರ್ಸಲ್ ಸಮಯದಲ್ಲಿ ಅರ್ಜುನ್ ಸರ್ಜಾ ನನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಶ್ರುತಿ ಆರೋಪ ಮಾಡಿದ್ದರು. ಈ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿ ರಾಜ್ಯಾದ್ಯಂತ ಭಾರೀ ಸದ್ದು ಮಾಡಿತ್ತು.
ಶ್ರುತಿ ಹಾಗೂ ಅರ್ಜುನ್ ಮಧ್ಯೆ ಸಂಧಾನ ಮಾಡಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪ್ರಯತ್ನಿಸಿತ್ತು. ಆದರೆ ರಾಜಿ ಸಂಧಾನಕ್ಕೆ ಅರ್ಜುನ್ ಸರ್ಜಾ ಮತ್ತು ಶೃತಿ ಹರಿಹರನ್ ಒಪ್ಪಿರಲಿಲ್ಲ.
ಶ್ರುತಿ ಹರಿಹರನ್ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದರು. ಮೂರು ವರ್ಷ ತನಿಖೆ ನಡೆಸಿ ಸಾಕ್ಷ್ಯ ಸಿಗದ ಕಾರಣ 2021 ಡಿಸೆಂಬರ್ನಲ್ಲಿ ಕೋರ್ಟ್ಗೆ ಪೊಲೀಸರು ಬಿ ರಿಪೋರ್ಟ್ ಸಲ್ಲಿಕೆ ಮಾಡಿದ್ದರು.
ಪೊಲೀಸರ ನೀಡಿದ್ದ ಬಿ ರಿಪೋರ್ಟ್ನ್ನು ಶ್ರುತಿ ಹರಿಹರನ್ ಪ್ರಶ್ನೆ ಮಾಡಿದ್ದರು. ಈದೀಗ ಶ್ರುತಿ ಹರಿಹರನ್ ಬೆಂಗಳೂರಿನ 8ನೇ ಎಸಿಎಂಎಂ ಕೋರ್ಟ್ನಿಂದ ನೋಟಿಸ್ ಜಾರಿ ಆಗಿದೆ. ಸಾಕ್ಷ್ಯ ಒದಗಿಸುವಂತೆ ಸೂಚಿಸಲಾಗಿದೆ.