ಮಂಗಳೂರು: ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ, ಸಾಹಿತಿ ಹಾಗೂ ಸಮಾಜ ಸೇವಕಿ ಡಾ. ಮಾಲತಿ ಶೆಟ್ಟಿ ಮಾಣೂರವರು ಬಂಗಾರದ ಮುತ್ತು ಡಾ. ರಾಜ್ಕುಮಾರ್ ಅಭಿಮಾನಿಗಳ ವೇದಿಕೆ, ಬೆಂಗಳೂರು ಕೊಡ ಮಾಡುವ ಪ್ರತಿಷ್ಠಿತ ಡಾ. ಪುನೀತ್ರಾಜ್ ಕುಮಾರ್ ಸದ್ಭಾವನ ಪ್ರಶಸ್ತಿಗೆ ಪತ್ರಿಕೋದ್ಯಮ ಕನ್ನಡ ನಾಡು ನುಡಿ ನೀಡಿರುವ ಅಪಾರ ಸೇವೆ ಪರಿಗಣಿಸಿ ಪ್ರಶಸ್ತಿಗೆ ಆಯ್ಕೆಯಾಗಿದ್ದು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಜುಲೈ 14ರಂದು ನಡೆಯಲಿದೆ.
ಹೆಸರಾಂತ ನಟ ಶಿವರಾಜ್ ಕುಮಾರ್ ಹಾಗೂ ಅಶ್ವಿನಿ ಪುನೀತ್ ರಾಜ್ ಕುಮಾರ್ ಪ್ರಶಸ್ತಿ ಪ್ರದಾನ ಮಾಡುವರು ಎಂದು ಕಾರ್ಯಕ್ರಮ ಸಂಯೋಜಕರಾದ ಡಾ. ಹೆಚ್. ಮಹೇಶ್ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಇತರ ಸಾಹಿತಿಗಳ 36 ಕೃತಿಗಳನ್ನು ಒಳಗೊಂಡಿರುವ ಸರಣಿ ಕೃತಿ ಬಿಡುಗಡೆಗೊಳ್ಳಲಿದೆ.
ಡಾ. ಮಾಲತಿ ಶೆಟ್ಟಿ ಮಾಣೂರುರವರು 17 ವರ್ಷಗಳಿಂದ ಸಾಹಿತ್ಯ ಹಾಗೂ ಪತ್ರಿಕೋದ್ಯಮದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಕಳೆದ 10 ವರ್ಷಗಳಿಂದ ಸಾಹಿತ್ಯ ಪರ ಅಮೃತ ಪ್ರಕಾಶ ಪತ್ರಿಕೆಯನ್ನು ನಡೆಸುತ್ತಿದ್ದಾರೆ. ಈಗಾಗಲೇ 9 ಕೃತಿಗಳನ್ನು ಇವರು ಪ್ರಕಟಿಸಿದ್ದಾರೆ. 8 ರಾಜ್ಯ ಹಾಗೂ 4 ರಾಷ್ಟ್ರ ಪ್ರಶಸ್ತಿಗಳು ಇವರಿಗೆ ಪ್ರಾಪ್ತವಾಗಿದೆ. ಅತ್ತಾವರ ಸಾಹಿತ್ಯ ನಂದನದಲ್ಲಿ ಪತಿ ಸತ್ಯಪ್ರಕಾಶ್ ಶೆಟ್ಟಿ ಜೊತೆ ವಾಸವಾಗಿದ್ದಾರೆ.