ಈ ದಿನದ ರೌಂಡ್ ಅಪ್: ಟಾಪ್ 4 ಸುದ್ದಿಗಳು ಇಲ್ಲಿವೆ
ಹುಬ್ಬಳ್ಳಿ ವಿಮಾನ ನಿಲ್ದಾಣ ಟರ್ಮಿನಲ್ ಅಭಿವೃದ್ದಿಗೆ ಕೇಂದ್ರದಿಂದ ಬಂಪರ್ ಕೊಡುಗೆ!
ಹುಬ್ಬಳ್ಳಿ ವಿಮಾನ ನಿಲ್ದಾಣ ಟರ್ಮಿನಲ್ ನಿಲ್ದಾಣದ ಟರ್ಮಿನಲ್ ಅಭಿವೃದ್ದಿಗಾಗಿ ಕೇಂದ್ರ ಸರ್ಕಾರದಿಂದ 273 ಕೋಟಿ ರೂ. ಅನುದಾನ ಸಿಕ್ಕಿದೆ.
ಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ ವಿಸ್ತರಣೆಗೆ ಕೇಂದ್ರ ಸರ್ಕಾರ ಹಸಿರು ನಿಶಾನೆ ನೀಡಿ, ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.
ನೂತನ ಯೋಜನೆಯಂತೆ ವಿಮಾನ ನಿಲ್ದಾಣದ ಟರ್ಮಿನಲ್ 20 ಸಾವಿರ ಚ.ಮೀ ವಿಸ್ತರಣೆಗೊಳ್ಳಲಿದೆ. ನೆಲಮಹಡಿ ಹಾಗೂ ಮೊದಲ ಮಹಡಿ ಸೇರಿ ಹುಬ್ಬಳ್ಳಿ ವಿಮಾನ ನಿಲ್ಧಾಣದಲ್ಲಿ ಏಕ ಕಾಲಕ್ಕೆ 1400ಕ್ಕೂ ಅಧಿಕ ಪ್ರಯಾಣಿಕರನ್ನು ನಿರ್ವಹಿಸುವ ಸಾಮರ್ಥ್ಯ ಹೊಂದಿರಲಿದೆ.
ಇನ್ನು ಈ ವಿಮಾನ ನಿಲ್ದಾಣದ ಟರ್ಮಿನಲ್ ವಿಸ್ತರಣೆ ಕಾಮಗಾರಿ ಜನವರಿಯಲ್ಲಿ ಪ್ರಾರಂಭವಾಗಲಿದ್ದು, ಮುಂದಿನ ಎರಡು ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಟ್ವೀಟ್ ಮಾಡಿದ್ದಾರೆ.
ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಿದಕ್ಕೆ ಗರಂ ಆದ್ರು ಸಿಎಂ ಸಿದ್ದು!
ಮೈಸೂರಿನ ವರುಣಾ ಕ್ಷೇತ್ರದಲ್ಲಿ ಕೃತಜ್ಞತಾ ಸಮಾವೇಶ ಸೇರಿದಂತೆ ವಿವಿಧ ಕಾರ್ಯಕ್ರಮಗಳ ನಿಮಿತ್ತ ಸಿಎಂ ಸಿದ್ದರಾಮಯ್ಯ ಅವರು ಮೈಸೂರು ಏರ್ ಪೋರ್ಟ್ ನಿಂದ ಜಿಲ್ಲಾ ಪಂಚಾಯ್ತಿ ಕಚೇರಿಗೆ ಆಗಮಿಸುವ ವೇಳೆ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಲಾಗಿತ್ತು.
ಇದನ್ನು ಗಮನಿಸಿದ ಸಿಎಂ ಮೈಸೂರು ಜಿಲ್ಲಾ ಪೊಲೀಸ್ ಆಯುಕ್ತರಿಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಬಾರದಿತ್ತು ಎಂದು
ನಿಮಗೆ ಗೊತ್ತಿದೆ ಅಲ್ವಾ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಕಾರಿನಿಂದ ಇಳಿದ ಕೂಡಲೇ ಪೊಲೀಸ್ ಆಯುಕ್ತ ರಮೇಶ್ ಭಾನೋತ್ ಹಾಗೂ ಡಿಸಿಪಿ ಮುತ್ತುರಾಜ್ ಅವರಿಗೆ ಕ್ಲಾಸ್ ತಗೊಂಡರು.
ನೌಕಾಪಡೆಯಿಂದ ಐಎನ್ ಎಸ್ ವಿಕ್ರಾಂತ್, ವಿಕ್ರಮಾದಿತ್ಯ ಗಳ ಯಶಸ್ವಿ ತಾಲೀಮು
ಚೀನಾ ಜೊತೆಗಿನ ಉದ್ವಿಗ್ನ ಸ್ಥಿತಿಯ ನಡುವೆಯೂ ಭಾರತೀಯ ನೌಕಾಪಡೆಯು ಇದೇ ಮೊದಲ ಬಾರಿಗೆ ತನ್ನ ವ್ಯಾಪ್ತಿಯ ಹಿಂದೂ ಮಹಾಸಾಗರದಲ್ಲಿ ಯುದ್ದ ವಿಮಾನಗಳ ನೌಕಾ ವಾಹನಗಳಾದ ಐಎನ್ ಎಸ್ ವಿಕ್ರಮಾದಿತ್ಯ ಮತ್ತು ಐಎನ್ ಎಸ್ ವಿಕ್ರಾಂತ್ ಪೂರ್ಣಪ್ರಮಾಣದ ಅಭ್ಯಾಸ ನಡೆಸಿ, ಅವುಗಳ ಸಾಮರ್ಥ್ಯ ಪ್ರದರ್ಶಿಸಿವೆ.
ಈ ವೇಳೆ ಮಿಗ್ -29ಕೆ ಯುದ್ದ ವಿಮಾನಗಳು, ಎಂಎಚ್ 60 ಆರ್, ಹಾಗೂ ಕಾಮೊವ್, ಸೀ ಕಿಂಗ್, ಚೇತಕ್, ದೇಸಿ ವಿಮಾನಗಳು ಸೇರಿ 35 ಯುದ್ದವಿಮಾನಗಳನ್ನು ಹೊತ್ತ ಎರಡು ನೌಕಾವಾಹನಗಳು ಸಮುದ್ರದಲ್ಲಿ ಸಂಚರಿಸಿ ತಮ್ಮ ಸಾಮರ್ಥ್ಯ ಪ್ರದರ್ಶಿಸಿವೆ.
ನಾಳೆ ವಿಧಾನಸೌಧ ಎದುರು ಶಕ್ತಿ ಯೋಜನೆಗೆ ಸಿಎಂ ಚಾಲನೆ
ನಾಳೆ ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಶಕ್ತಿ ಯೋಜನೆಗೆ ನಾಳೆ ವಿಧಾನಸೌಧದ ಮುಂದೆ ಚಾಲನೆ ಸಿಗಲಿದೆ.
ನಾಳೆ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಪಾಲ್ಗೊಂಡರೆ ಸಂಚಾರ ದಟ್ಟಣೆಯಾಗಬಹುದು ಎಂದು ಅಂದಾಜಿಸಲಾಗಿದೆ. ಈ ನಿಟ್ಟಿನಲ್ಲಿ ವಾಹನ ಸವಾರರ ಸುಲಭ ಸಂಚಾರಕ್ಕೆ ಪರ್ಯಾಯ ಮಾರ್ಗವನ್ನು ಪೊಲೀಸ್ ಇಲಾಖೆ ಸೂಚಿಸಿದೆ.
ಬೆಳಗ್ಗೆ 11 ಗಂಟೆಗೆ ವಿಧಾನ ಸೌಧದ ಮುಂಭಾಗ ಕಾರ್ಯಕ್ರಮ ನಡೆಯಲಿದೆ. ಅಂಬೇಡ್ಕರ್ ರಸ್ತೆಯಲ್ಲಿ ಸಂಚಾರ ದಟ್ಟಣೆ ಹೆಚ್ಚಾದರೆ ಕೆ. ಆರ್. ಸರ್ಕಲ್ ಕಡೆಯಿಂದ ಬಾಳೆಕುಂದ್ರಿ ಸರ್ಕಲ್ ಕಡೆಗೆ ತೆರಳುವ ವಾಹನಗಳು ನೃಪತುಂಗ ರಸ್ತೆ ಬಳಸಬಹುದು.
ಬಾಳೆಕುಂದ್ರಿ ಸರ್ಕಲ್ ನಿಂದ ಕೆ. ಆರ್. ಸರ್ಕಲ್ ರಸ್ತೆ ಕಡೆಗೆ ಹೋಗುವ ಸವಾರರು ಕ್ವೀನ್ಸ್ ರಸ್ತೆ ಸಿದ್ದಲಿಂಗಯ್ಯ ರಸ್ತೆ ಮೂಲಕ ಸಂಚರಿಸಬಹುದು.
ಕಾರ್ಯಕ್ರಮ ಹೇಗಿರುತ್ತೆ?
ವಿಧಾನಸೌಧದ ಮುಂಭಾಗ 4 ನಿಗಮಗಳ ಸಾಮಾನ್ಯ ಬಸ್ ಗಳನ್ನು ನಿಲ್ಲಿಸಲಿದ್ದಾರೆ. ಬಳಿಕ ನಾಡಗೀತೆ ಹಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಸಿಗಲಿದೆ. ಈ ವೇಳೆ ಸಿದ್ದರಾಮಯ್ಯ ಅವರು ಶಕ್ತಿ ಯೋಜನೆಯ ಲೋಗೋ ಅನಾವರಣಗೊಳಿಸಲಿದ್ದಾರೆ.
ನಂತರ ವಿಧಾನ ಸೌಧ, ಮೆಜೆಸ್ಟಿಕ್ ಅಥವಾ ಮೈಸೂರು ಬ್ಯಾಂಕ್ ಸರ್ಕಲ್ ವರೆಗೆ ಬಿಎಂಟಿಸಿ ಬಸ್ ನಲ್ಲಿ ಸಿಎಂ ಸಿದ್ದು ಒಂದು ರೌಂಡ್ ಹೋಗಲಿದ್ದಾರೆ.
ನಾಳೆ ಮಧ್ಯಾಹ್ನ 1 ಗಂಟೆಯ ಬಳಿಕ ಬಿಎಂಟಿಸಿ, ಕೆಎಸ್ ಆರ್ ಟಿಸಿ, ಎನ್ ಎಬ್ಲ್ಯೂ ಕೆಆರ್ ಟಿಸಿ, ಕೆಕೆಆರ್ ಟಿಸಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡಲಾಗುತ್ತದೆ.