ಮಂಗಳೂರು: ರಾಷ್ಟ್ರ ಮಟ್ಟದಲ್ಲಿ ಭಾರೀ ಸುದ್ದಿಯಾಗಿದ್ದ ಉಜಿರೆ ಎಸ್ಡಿಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಆತ್ಯಾಚಾರ ಹಾಗೂ ಕೊಲೆ ಪ್ರಕರಣದ ತೀರ್ಪು ಇಂದು ಪ್ರಕಟವಾಗಿದೆ.
ಪ್ರಕರಣ ಸಂಬಂಧ ಸಿಬಿಐ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ನೀಡಿದ್ದು, ಆರೋಪಿ ಸಂತೋಷ್ ರಾವ್ ಅವರನ್ನು ದೋಷ ಮುಕ್ತ ಎಂದು ಆದೇಶ ಹೊರಡಿಸಿದೆ.
ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಪ್ರಕರಣದ ವಿಚಾರಣೆ ನಡೆಸಿದ್ದಾರೆ. ಸಾಕ್ಷ್ಯಾಧಾರಗಳ ಕೊರತೆಯಿಂದ ಆರೋಪಿ ಸಂತೋಷನ್ನು ಬಿಡುಗಡೆ ಮಾಡಲಾಗಿದೆ.