ಚಿತ್ರಮಂದಿರಗಳಲ್ಲಿಸದ್ದು ಮಾಡಿದ್ದ ಡೇರ್ಡೆವಿಲ್ ಮುಸ್ತಾಫಾ ಸಿನಿಮಾ ಸದ್ದಿಲ್ಲದೇ ಒಟಿಟಿ ಅಗಂಳಕ್ಕೆ ಲಗ್ಗೆ ಇಟ್ಟಿದೆ. ಕನ್ನಡದ ಪ್ರಮುಖ ಸಾಹಿತಿ ಕೆ.ಪಿ ಪೂರ್ಣ ಚಂದ್ರ ತೇಜಸ್ವಿಅವರ ಕಥೆಯಾಧರಿತ ಡೇರ್ಡೆವಿಲ್ ಮುಸ್ತಾಫಾ ಸಿನಿಮಾಗೆ ಕಳೆದ ಎರಡು ದಿನಗಳ ಹಿಂದೆಯಷ್ಟೇ ಸಿಎಂ ಸಿದ್ದರಾಮಯ್ಯ ವಿನಾಯಿತಿಯನ್ನು ನೀಡಿದ್ದರು.
ಮೇ 19ರಂದು ತೆರೆಕಂಡಿದ್ದ ಪೂರ್ಣಚಂದ್ರ ತೇಜಸ್ವಿ ಅವರ ಕಥೆಯಾಧಾರಿತ ಡೇರ್ ಡೆವಿಲ್ ಮುಸ್ತಾಫಾ ಸಿನಿಮಾ, ಮೇಕಿಂಗ್ ಮತ್ತು ಕಂಟೆಂಟ್ ಮೂಲಕವೇ ಸಿನಿ ಪ್ರಿಯರ ಮನಸ್ಸನ್ನು ಗೆದ್ದಿತ್ತು.
ಚಿತ್ರಮಂದಿರಗಳಲ್ಲಿ 25 ದಿನಗಳನ್ನು ಪೂರೈಸಿದ ಖುಷಿಯಲ್ಲಿದ್ದ ‘ಡೇರ್ಡೆವಿಲ್ ಮುಸ್ತಾಫಾ’ ಚಿತ್ರ ಇದೀಗ ಅಮೆಜಾನ್ ಪ್ರೈಂನಲ್ಲಿ ಸ್ಟ್ರೀಮಿಂಗ್ ಆರಂಭಿಸಿದೆ. ಈ ವಿಚಾರವನ್ನು ಚಿತ್ರತಂಡ ರಿವೀಲ್ ಮಾಡದಿದ್ದರೂ, ಪ್ರೈಂ ಇಂಡಿಯಾ ತನ್ನ ಸೋಷಿಯಲ್ ಮೀಡಿಯಾದಲ್ಲಿ ಅಧಿಕೃತ ಘೋಷಣೆ ಮಾಡಿದೆ.
ಡೇರ್ ಡೆವಿಲ್ ಮುಸ್ತಾಫಾ ಚಿತ್ರವನ್ನು ಸಿನಿಮಾಮರ ಬ್ಯಾನರ್ ಅಡಿಯಲ್ಲಿ ಶಶಾಂಕ್ ಸೋಗಾಲ್ ನಿರ್ದೇಶನ ಮಾಡಿದ್ದಾರೆ. ಶಶಾಂಕ್ ಸೋಗಾಲ್, ಸಂಪತ್ ಸಿರಿಮನೆ, ಡಾಲಿ ಧನಂಜಯ್ ಬರೆದಿರುವ ಸಾಹಿತ್ಯಕ್ಕೆ ನವನೀತ್ ಶ್ಯಾಮ್ ಸಂಗೀತ ನೀಡಿದ್ದಾರೆ. ರಾಹುಲ್ ರಾಯ್ ಛಾಯಾಗ್ರಹಣ ಮಾಡಿದ್ದಾರೆ.
ಸಿನಿಮಾದಲ್ಲಿ ಪ್ರಮುಖ ಪಾತ್ರಗಳಾದ ಮುಸ್ತಫಾ ಮಾತ್ರದಲ್ಲಿ ಶಿಶಿರ್ ಬೈಕಾಡಿ, ರಾಮಾನುಜ ಅಯ್ಯಂಗಾರಿ ಪಾತ್ರದಲ್ಲಿ ಆದಿತ್ಯ ಅಶ್ರೀ ನಟಿಸಿದ್ದಾರೆ. ಇನ್ನು ಅಭಯ್, ಸುಪ್ರೀತ್ ಭಾರದ್ವಾಜ್, ಆಶಿತ್, ಶ್ರೀವತ್ಸ, ಪ್ರೇರಣಾ, ಹಿರಿಯ ನಟ ಉಮೇಶ್, ಮಂಡ್ಯ ರಮೇಶ್, ಮೈಸೂರ್ ಆನಂದ್, ಸುಂದರ್ ವೀಣಾ, ನಾಗಭೂಷಣ್, ಪೂರ್ಣಚಂದ್ರ ಸೇರಿ ಅನೇಕ ಕಲಾವಿದರು ಡೇರ್ ಡೆವಿಲ್ ಮುಸ್ತಾಫಾ ಚಿತ್ರದಲ್ಲಿ ಬಣ್ಣಹಚ್ಚಿದ್ದಾರೆ.