ರಾಜಕೀಯ, ಕೃಷಿ, ವಿಶ್ವ ನಾಯಕನ ಪ್ರವಾಸ: ಏನೆಲ್ಲಾ ಇದೆ ಈ ರೌಂಡ್ ಅಪ್ ನಲ್ಲಿ?
ಅನ್ನಭಾಗ್ಯಕ್ಕೆ ಅಕ್ಕಿ ಕೊಡದಂತೆ ತಡೆದವರು ಈಗ ಧರಣಿ ಮಾಡ್ತಾರಂತೆ: ಮುಖ್ಯಮಂತ್ರಿ ವ್ಯಂಗ್ಯ
ನಮ್ಮ ಸರ್ಕಾರದಲ್ಲಿ ಸಾಹಿತಿಗಳು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಆತಂಕ ಪಡಬೇಕಾಗಿಲ್ಲ . ವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ರಕ್ಷಣೆ ಮಾಡುತ್ತೇವೆ. ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಯಾರೂ ಹೆದರಬೇಕಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಹಿತಿಗಳಿಗೆ ಅಭಯ ನೀಡಿದರು.
ಅವರು ಇಂದು ಕರ್ನಾಟಕ ರಾಜ್ಯ ಬರಹಗಾರರು ಹಾಗೂ ಪ್ರಕಾಶಕರ ಸಂಘದ 20 ನೇ ವಾರ್ಷಿಕೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಸಾಹಿತಿಗಳ ಬಗ್ಗೆ ಅಪಾರ ಗೌರವ ಇರುವುದಾಗಿ ತಿಳಿಸಿದ ಮುಖ್ಯ ಮಂತ್ರಿಗಳು ಸಾಹಿತಿಗಳು ಸಮಾಜವನ್ನು ತಿದ್ದುವಂಥವರು ಎಂದರು. ಅಧಿಕಾರದಲ್ಲಿದ್ದಾಗ ನೀಡಿದ್ದ ಭರವಸೆಗಳನ್ನು ಈಡೇರಿಸದಿದ್ದವರು ಈಗ ಟೀಕೆ ಗಳನ್ನು ಮಾಡುತ್ತಿದ್ದಾರೆ.
ಜನರ ಹಣವನ್ನು ಖರ್ಚು ಮಾಡುವಾಗ ಎಚ್ಚರಿಕೆ ಅಗತ್ಯ: ಒಂದು ತಿಂಗಳಿಗೆ 840 ಕೋಟಿ ರೂ. ಅಕ್ಕಿ ಅಗತ್ಯವಿದೆ. ಅಷ್ಟು ಮೊತ್ತ ನೀಡಲು ನಾವು ಸಿದ್ದವಿದ್ದೇವೆ ಎಂದು ಸ್ಪಷ್ಟ ಪಡಿಸಿದ್ದೇವೆ. ಮಹಿಳೆಯರಿಗೆ ಗೃಹ ಲಕ್ಷ್ಮೀ ಯೋಜನೆಯಡಿ ಅರ್ಜಿ ಕರೆಯಲಾಗಿದೆ. ತೆರಿಗೆ ಹಣ ಒಬ್ಬರ ಖಾಸಗಿ ಸ್ವತ್ತಲ್ಲ. ಜನರ ಹಣವನ್ನು ಖರ್ಚು ಮಾಡುವಾಗ ಎಚ್ಚರಿಕೆ ಅಗತ್ಯ. 200 ಯೂನಿಟ್ ಉಚಿತ ವಿದ್ಯುತ್ ನೀಡುವ ಯೋಜನೆಗೆ 200 ಯೂನಿಟ್ ಗೆ ಕೊಡಬೇಕು ಎನ್ನುತ್ತಾರೆ.
ಲೇಖಕರ ಬರವಣಿಗೆಗಳು ಸಮಾಜಮುಖಿಯಾಗಿರಬೇಕು: ಲೇಖಕರ ಬರವಣಿಗೆಗಳು ಸಮಾಜಮುಖಿಯಾಗಿರಬೇಕು. ಸಮಾಜ ನನಗೇನು ನೀಡಿದೆ ಎಂದು ಪ್ರಶ್ನಿಸುವ ಬದಲು ಸಮಾಜಕ್ಕೆ ನನ್ನ ಕೊಡುಗೆಯೇನು ಎಂದು ಪ್ರಶ್ನಿಸಿಕೊಳ್ಳಬೇಕು.
ಅಸಮಾನತೆ ಹೋಗಲಾಡಿಸಿದರೆ ಸಮಾಜ ಅಭಿವೃದ್ಧಿಯಾಗುತ್ತದೆ: ಸಮಾಜದಲ್ಲಿ ಬದಲಾವಣೆಗಳಾಗಬೇಕು. ಜಾತಿ ಪದ್ಧತಿಯ ಕಾರಣ, ಬಹಳ ಜನ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದಾರೆ. ಇದರಿಂದ ಆರ್ಥಿಕ, ಸಾಮಾಜಿಕ ಅಸಮಾನತೆ ಉಂಟಾಗುತ್ತದೆ. ಈ ಅಸಮಾನತೆಯನ್ನು ಹೋಗಲಾಡಿಸಿದರೆ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ನೆಲೆಸಿ ಅಭಿವೃದ್ಧಿ ಸಾಧ್ಯವಿದೆ. ನ
ಜ್ಞಾನ ವೃದ್ಧಿಗಾಗಿ ಪುಸ್ತಕವನ್ನು ಓದಲೇಬೇಕು: ಜ್ಞಾನ ವೃದ್ಧಿಗಾಗಿ ಪುಸ್ತಕವನ್ನು ಓದಲೇಬೇಕು. ಕಲಿತಷ್ಟು ಜ್ಞಾನ ವಿಕಾಸಗೊಳ್ಳುತ್ತದೆ. ಲೇಖಕರ ಬರಣವಣಿಗೆಗಳು ಸಮಾಜಮುಖಿಯಾಗಿರಬೇಕು ಎಂದು ತಿಳಿಸಿದರು.
ಬೀಗ, ರಸಗೊಬ್ಬರ, ಔಷಧದ ಸಮೇತ ಕೃಷಿ ಇಲಾಖೆ ಸರ್ವ ಸನ್ನದ್ದವಾಗಿದೆ
ರಾಜ್ಯ ಸರ್ಕಾರ ಎಲ್ಲಾ ಸಮಸ್ಯೆಗಳನ್ನು ಎದುರಿಸಲು ಶಕ್ತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ರಾಜ್ಯದಲ್ಲಿ ಪ್ರಸ್ತುತ ಮಳೆ ಶುರುವಾಗಿದೆ. ಮಳೆ ಇನ್ನಷ್ಟು ವ್ಯಾಪಕವಾಗಿ ಆಗಬೇಕಿದೆ. ಮಳೆ ಬರಲಿ ಎಂದು ಪ್ರಾರ್ಥಿಸುತ್ತಿದ್ದು, ಬಿತ್ತನೆ ಈಗಾಗಲೇ ಕೆಲವೆಡೆ ಪ್ರಾರಂಭವಾಗಿದೆ.
ಬಿತ್ತನೆಗೆ ಸಿದ್ಧ: ಮಳೆ ಯಾವಾಗ ಬಂದರೂ ಬಿತ್ತನೆ ಮಾಡಲು ತಯಾರಾಗಿದ್ದೇವೆ. ಕೃಷಿ ಇಲಾಖೆ ಬೀಜ, ಗೊಬ್ಬರ ಹಾಗೂ ಔಷಧಿಗಳನ್ನು ಸಂಗ್ರಹಿಸಿ ಸರ್ವಸನ್ನದ್ದವಾಗಿದೆ ಎಂದರು.
ಬಜೆಟ್ ನಂತರ ಪರಿಶೀಲನೆ: ಸಣ್ಣ ಕೈಗಾರಿಕೆಗಳು ಹಾಗೂ ಕಾಸಿಯಾ ಪ್ರತಿನಿಧಿಗಳೊಂದಿಗೆ ನಿನ್ನೆ ನಡೆದ ಚರ್ಚೆಯಲ್ಲಿ ಅವರು ತಮ್ಮ ಸಮಸ್ಯೆಗಳನ್ನು ತಿಳಿಸಿದ್ದಾರೆ. ಬಜೆಟ್ ಮಂಡನೆಯ ನಂತರ ಈ ಬಗ್ಗೆ ಪರಿಶೀಲಿಸುವ ಭರವಸೆ ನೀಡಲಾಗಿದೆ ಎಂದರು. ಕೈಗಾರಿಕೆಗಳಿಗೆ ಒಂಭತ್ತು ತಿಂಗಳ ವಿದ್ಯುತ್ ತೆರಿಗೆ ವಿಧಿಸಲಾಗಿದೆ. ಇದರಿಂದ ತಮಗೆ ಹೊರೆಯಾಗಿದೆ ಎಂದು ಕೈಗಾರಿಕೋದ್ಯಮಿಗಳು ತಿಳಿಸಿದ್ದಾರೆ.
ಬಡವರ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರದಿಂದ ತೊಂದರೆ: ಕೇಂದ್ರ ಸರ್ಕಾರದ ಬಳಿ ಲಕ್ಷಗಟ್ಟಲೆ ಟನ್ ಅಕ್ಕಿಯಿದೆ. ಖಾಸಗಿಯವರಿಗೆ ಹರಾಜು ಮಾಡುತ್ತಾರೆ, ಆದರೆ ರಾಜ್ಯಗಳಿಗೆ ನೀಡುವುದಿಲ್ಲ ಎನ್ನುತ್ತಾರೆ. ಹಣ ನೀಡಿದರೂ ಕೊಡುವುದಿಲ್ಲ. 36.70 ರೂ. ಗಳ ವೆಚ್ಚದಲ್ಲಿ 1 ಕೆಜಿ ಅಕ್ಕಿ ಪಡೆಯಬಹುದು.
ಧರಣಿ ಮಾಡಲು ನೈತಿಕ ಹಕ್ಕಿಲ್ಲ: ಬಿ.ಎಸ್.ಯಡಿಯೂರಪ್ಪ ಅವರು ಅಕ್ಕಿ ನೀಡದಿದ್ದರೆ ಧರಣಿ ಮಾಡುವುದಾಗಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರಿಗೆ ಧರಣಿ ಮಾಡುವ ಸ್ವಾತಂತ್ರ್ಯವಿದೆ. ಆದರೆ ಅವರಿಗೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು.
ಅಕ್ಕಿ ಖರೀದಿ: ಸರ್ಕಾರಿ ಏಜೆನ್ಸಿಗಳೊಂದಿಗೆ ಮಾತುಕತೆ: ಐದು ಗ್ಯಾರಂಟಿ ಯೋಜನೆಗಳ ಪೈಕಿ ಈಗಾಗಲೇ ಒಂದು ಯೋಜನೆಗೆ ಚಾಲನೆ ನೀಡಲಾಗಿದೆ. ಜುಲೈ ಒಂದರಿಂದ ಉಚಿತ ವಿದ್ಯುತ್ ಯೋಜನೆ ಜಾರಿಗೆ ಬರಲಿದೆ.ಅಕ್ಕಿಯನ್ನೂ ನೀಡಬೇಕೆಂಬ ಉದ್ದೇಶವಿದ್ದರೂ ಅಕ್ಕಿ ದೊರೆಯುತ್ತಿಲ್ಲ. ದೊರೆತರೂ ಹೆಚ್ಚಿನ ದರ ಕೇಳುತ್ತಾರೆ. 2.29 ಲಕ್ಷ ಮೆಟ್ರಿಕ್ ಟನ್ ಎಲ್ಲಿಯೂ ದೊರೆಯುತ್ತಿಲ್ಲ. ಎಲ್ಲಾ ರಾಜ್ಯದವರೂ ಪೂರ್ಣಪ್ರಮಾಣದ ಅಕ್ಕಿ ದೊರೆಯುತ್ತಿಲ್ಲವಾದ್ದರಿಂದ ಬೇರೆ ಸರ್ಕಾರಿ ಏಜೆನ್ಸಿಗಳಿಂದ ಎನ್.ಸಿ.ಸಿ.ಎಫ್ ನಿಂದ ಕೇಂದ್ರೀಯ ಭಂಡಾರ್, ನ್ಯಾಫೆಡ್ ಸಂಸ್ಥೆಗಳಿಂದ ದರಪಟ್ಟಿ ಕರೆಯಲಾಗಿದ್ದು, ಮಾತುಕತೆ ನಡೆದಿದೆ. ಜೋಳ, ರಾಗಿ ವಿತರಣೆ 6 ತಿಂಗಳಿಗಾಗುವಷ್ಟಿದೆ. 2 ಕೆಜಿಯಂತೆ ನೀಡಬಹುದು. ಇನ್ನೂ 3 ಕೆಜಿ ಅಕ್ಕಿ ನೀಡಬೇಕಿದೆ. ಇಡೀ ವರ್ಷ ನೀಡುವಷ್ಟು ರಾಗಿ, ಜೋಳವಿಲ್ಲ ಎಂದರು.
ವಾಸ್ತು ದೋಷಕ್ಕೆ ಇಲ್ಲ ಕೇರ್, ಬಂದ್ ಮಾಡಲಾಗಿದ್ದ ವಿಧಾನಸೌಧ ಕಚೇರಿ ಧ್ವಾರ ಓಪನ್ ಮಾಡಿಸಿದ ಸಿಎಂ
ವಾಸ್ತು ಸರಿಯಿಲ್ಲ ಎನ್ನುವ ಕಾರಣದಿಂದ ಬಂದ್ ಮಾಡಲಾಗಿದ್ದ ವಿಧಾನಸೌಧದ ಮುಖ್ಯಮಂತ್ರಿ ಕಚೇರಿಯ ದಕ್ಷಿಣ ದ್ವಾರ ತೆರೆಸಿದ ಮುಖ್ಯಮಂತ್ರಿಗಳು. ಅನ್ನಭಾಗ್ಯ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲು ವಿಧಾನಸೌಧಕ್ಕೆ ಆಗಮಿಸಿದ ಮುಖ್ಯಮಂತ್ರಿಗಳು ದಕ್ಷಿಣ ದ್ವಾರ ಬಂದ್ ಆಗಿರುವುದನ್ನು ಗಮನಿಸಿದರು.
ವಾಸ್ತು ಕಾರಣದಿಂದ ಬಂದ್ ಮಾಡಲಾಗಿದೆ ಎನ್ನುವ ಉತ್ತರ ಅಧಿಕಾರಿಗಳಿಂದ ಬಂದ ಬಳಿಕ ಮುಖ್ಯಮಂತ್ರಿಗಳು ಆ ದ್ವಾರದಲ್ಲೇ ನಿಂತರು. ಪಶ್ಚಿಮ ದ್ವಾರದಿಂದ ಸಿಬ್ಬಂದಿ ಒಳಗೆ ಹೋಗಿ ದಕ್ಷಿಣದ ದ್ವಾರವನ್ನು ತೆರೆದ ಬಳಿಕ ಅದೇ ದ್ವಾರದ ಮೂಲಕವೇ ತಮ್ಮ ಕಚೇರಿ ಪ್ರವೇಶಿಸಿದರು.
ಆರೋಗ್ಯಕರ ಮನಸ್ಸು, ಸ್ವಚ್ಚ ಹೃದಯ, ಜನಪರ ಕಾಳಜಿ, ಒಳ್ಳೆ ಗಾಳಿ ಬೆಳಕು ಬರುವಂತಿದ್ದರೆ ಅದೇ ಉತ್ತಮ ವಾಸ್ತು ಎಂದು ಅಧಿಕಾರಿಗಳ ಜತೆ ನಮ್ಮ ನಿಲುವನ್ನು ಹಂಚಿಕೊಂಡರು.
ಆಲ್ ಹಕೀಮ್ ಮಸೀದಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ
ಭಾರತದ ದಾವೂದಿ ಬೋಹ್ರಾ ಸಮುದಾಯದ ನೆರವಿನೊಂದಿಗೆ ಜೀರ್ಣೋದ್ಧಾರಗೊಂಡಿರುವ ಇಲ್ಲಿನ ಆಲ್ ಹಕೀಮ್ ಮಸೀದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಭೇಟಿ ನೀಡಲಿದ್ದಾರೆ.
ಶನಿವಾರದಿಂದ ಈಜಿಪ್ಟ್ ಪ್ರವಾಸದಲ್ಲಿರುವ ಪ್ರಧಾನಿ ಮೋಓದಿ, ಭಾನುವಾರ ಮಸೀದಿ ಭೇಟಿ ನಿಗದಿಯಾಗಿದೆ.
11ನೇ ಶತಮಾನದಲ್ಲಿ ಫಾತಿಮಿದ್ ಸಾಮ್ರಾಜ್ಯದ ಆಡಳಿತದಲ್ಲಿ ನಿರ್ಮಾಣಗೊಂಡ ಈ ಮಸೀದಿಯ ಜೀರ್ಣೋದ್ಧಾತಕ್ಕೆ ದಾವೂದಿ ಮೋಹ್ರಾ ಸಮುದಾಯ ನೆರವು ನೀಡಿತ್ತು. ಕಳೆದ ಮೂರು ತಿಂಗಳ ಹಿಂದೆಯಷ್ಟೆ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಈ ಬಳಿಕ ಬೊಹ್ರಾ ಸಮುದಾಯವು 1970ರ ನಂತರ ಈ ಮಸೀದಿಯ ನಿರ್ವಹಣೆಯ ಹೊಣೆ ಹೊತ್ತುಕೊಂಡಿದೆ.
ರಷ್ಯಾದಲ್ಲಿ ವ್ಯಾಗ್ನಾರ್ ತಂಡದಿಂದ ದಂಗೆ: ಮಾಸ್ಕೋದಲ್ಲಿ ಹೈ ಅಲರ್ಟ್ ಘೋಷಣೆ
ರಷ್ಯಾದಲ್ಲಿ ಪ್ರಬಲ ಕೂಲಿ ಸೈನಿಕರ ಗುಂಪಾಗಿರುವ ವ್ಯಾಗ್ನರ್ ಶನಿವಾರ ಶಸ್ತ್ರಸಜ್ಜಿತವಾಗಿ ದಂಗೆ ನಡೆಸಿತು.
ರೋಸ್ಟೋವ್ ನಲ್ಲಿ ಮಿಲಿಟರಿ ಕಟ್ಟಡವನ್ನು ಸ್ವಾದೀನಕ್ಕೆ ಪಡೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಮಾಸ್ಕೋದಲ್ಲಿ ಭದ್ರತಾ ಪಡೆಗಳು ಹೈ ಅಲರ್ಟ್ ಘೋಷಿಸಿವೆ.
ರೋಸ್ಟೋವ್ ನಲ್ಲಿನ ಮಿಲಿಟರಿ ಕಟ್ಟಡದ ಮೇಲೆ ಹಿಡಿತ ಸಾಧಿಸಿಕೊಂಡಿವೆ. ತನ್ನ ಪಡೆಗಳು ದಕ್ಷಿಣ ಗಡಿ ಪ್ರದೇಶವನ್ನು ಪ್ರವೇಶಿಸಿವೆ ಎಂದು ವ್ಯಾಗ್ನರ್ ಗ್ರೂಪ್ ನ ಮುಖ್ಯಸ್ಥರು ತಿಳಿಸಿದ್ದಾರೆ.
ಈ ಬಳಿಕ ರೋಸ್ಟೊವ್ ನಲ್ಲಿರುವ ರಷ್ಯಾದ ಅಧಿಕಾರಿಗಳು ಮಾಸ್ಕೋದ ಜನತೆಗೆ ಮನೆಯೊಳಗೆ ಸುರಕ್ಷಿತವಾಗಿ ಇರುವಂತೆ ಮನವಿ ಮಾಡಿದೆ.
ಪ್ರಸ್ತುತ ಪರಿಸ್ಥಿತಿಯಲ್ಲಿ ದಯವಿಟ್ಟು ಯಾರು ನಗರ ಕೇಂದ್ರಕ್ಕೆ ಹೋಗಬೇಡಿ, ಮತ್ತು ನಿಮ್ಮ ಮನೆಯಿಂದ ಹೊರಗೆ ಬರಬೇಡಿ ಎಂದು ರೋಸ್ಟೊವ್ ನ ಗವರ್ನರ್ ಸಲಹೆ ನೀಡಿದ್ದಾರೆ.
ಇನ್ನು ಇಡಿಯಾ ಪ್ರದೇಶವನ್ನು ಭದ್ರಗೊಳಿಸಲು ಭಯೋತ್ಪಾನದ ವಿರೋಧಿ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.