ಭಾರತ್ ಜೋಡೋ ಯಾತ್ರೆಗಾಗಿ ಕೆಜಿಎಫ್ 2 ಹಾಡಿನ ಕಾಪಿರೈಟ್ ಮಾಡಿದ್ದಾರೆಂಬ ವಿಷಯಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧದ ಕೇಸ್ ರದ್ದುಪಡಿಸಲು ಹೈಕೋರ್ಟ್ ನಕಾರವೆತ್ತಿದೆ.
ರಾಹುಲ್ ಗಾಂಧಿ ಅವರು ಇತ್ತೀಚೆಗೆ ಭಾರತ್ ಜೋಡೋ ಯಾತ್ರೆಗಾಗಿ ಕರ್ನಾಟಕಕ್ಕೆ ಆಗಮಿಸಿದ್ದರು. ಕರ್ನಾಟಕದ ಹಲವು ಜಿಲ್ಲೆಗಳಿಗೆ ಕಾಲ್ನಡಿಗೆಯಲ್ಲಿ ಓಡಾಡಿದ್ದರು. ಈ ವೇಳೆ ರಾಹುಲ್ ಗಾಂಧಿ ಅವರ ಕಾಲ್ನಡಿಗೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿತ್ತು. ಹಾಗೇ ಹರಿಬಿಟ್ಟ ವಿಡಿಯೋಗೆ ‘ಕೆಜಿಎಫ್ 2’ ಚಿತ್ರದ ಹಿಂದಿ ಗೀತೆ ‘ಸುಲ್ತಾನ್..’ ಹಾಡನ್ನು ಬಳಕೆ ಮಾಡಿದ್ದರು.
ಭಾರತ್ ಜೋಡೋ ಯಾತ್ರೆ ವೇಳೆ ಕಾಂಗ್ರೆಸ್ ಪಕ್ಷದಿಂದ ಕೆಜಿಎಫ್ 2 ಹಾಡಿನ ದುರ್ಬಳಕೆ ಮಾಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಎಂಆರ್ಟಿ ಮ್ಯೂಸಿಕ್ನಿಂದ ರಾಹುಲ್ ಗಾಂಧಿ, ಜೈರಾಮ್ ರಮೇಶ್, ಸುಪ್ರಿಯಾ ವಿರುದ್ಧ FIR ದಾಖಲು ಮಾಡಲಾಗಿತ್ತು. ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ಧಗೊಳಿಸಿವಂತೆ ಕೋರಿ ರಾಹುಲ್ ಗಾಂಧಿ, ಜೈರಾಮ್ ರಮೇಶ್, ಸುಪ್ರಿಯಾ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ವಿಚಾರವಾಗಿ ನಡೆದ ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ತೀರ್ಪು ಕಾಯ್ದಿರಿಸಿತು.
ಈ ಕಾರಣಕ್ಕೆ ರಾಹುಲ್ ಗಾಂಧಿ ವಿರುದ್ಧ ಈ ಹಾಡಿನ ಹಿಂದಿ ಹಕ್ಕನ್ನು ಹೊಂದಿರುವ ಎಂಆರ್ಟಿ ಮ್ಯೂಸಿಕ್ನವರು ಕಾಪಿರೈಟ್ ಉಲ್ಲಂಘನೆ ಎಂಬ ಕೇಸ್ ದಾಖಲು ಮಾಡಿದ್ದರು. ಯಶವಂತಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದರು. ಹೀಗಾಗಿ ರಾಹುಲ್ ಗಾಂಧಿ ಮಾತ್ರವಲ್ಲದೆ, ಜೈರಾಮ್ ರಮೇಶ್, ಸುಪ್ರಿಯಾ ವಿರುದ್ಧವೂ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣವನ್ನು ಬೆಂಗಳೂರಿನ ವಾಣಿಜ್ಯ ಕೋರ್ಟ್ನಲ್ಲಿ ವಿಚಾರಣೆ ಮಾಡಲಾಗಿತ್ತು. ಈ ವೇಳೆ ದೂರುದಾರರು ನೀಡಿದ ದಾಖಲೆಗಳನ್ನು ಕೋರ್ಟ್ ಪರಿಗಣಿಸಿದ್ದು ಅದನ್ನು ಈಗ ರದ್ದುಪಡಿಸಲು ಒಪ್ಪಿಕೊಳ್ಳುತ್ತಿಲ್ಲ.