ಮಂಗಳೂರು: 2012 ರಲ್ಲಿ ಧರ್ಮಸ್ಥಳದಲ್ಲಿ ನಡೆದಿದ್ದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಕುರಿತು ಇಂದು ಸುದ್ದಿ ಗೋಷ್ಠಿ ನಡೆಸಿ ಮಾತನಾಡಿದ ಧೀರಜ್ ಕೆಲ್ಲ, ಉದಯ್ ಜೈನ್ ಮತ್ತು ಮಲ್ಲಿಕ್ ಜೈನ್ ಅವರು ನಮ್ಮ ವಿರುದ್ದ ಆರೋಪ ಮಾಡುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರು ಹಣಕ್ಕಾಗಿ ಆರೋಪ ಮಾಡುತಿದ್ದಾರೆ ಎಂದು ಆರೋಪಿಸಿದ್ದಾರೆ.
ಸೌಜನ್ಯ ಹತ್ಯಾಚಾರ ಪ್ರಕರಣದಲ್ಲಿ ಸಂತೋಷ್ ರಾವ್ ಎಂಬಾತನನ್ನು ಬಂಧಿಸಿ ಸಿಬಿಐ ಛಾರ್ಜ್ ಶೀಟ್ ಸಲ್ಲಿಸಿತ್ತು. ಆದರೆ ಸಿಬಿಐ ನ್ಯಾಯಾಲಯವು ಆರೋಪಿಯನ್ನು ನಿರ್ದೋಷಿ ಎಂದು ಬಿಡುಗಡೆ ಮಾಡಿ ಜೂನ್ 16 ರಂದು ತೀರ್ಪು ನೀಡಿತ್ತು. ತೀರ್ಪಿನಲ್ಲಿ ತನಿಖೆಯಲ್ಲಿ ಇರುವ ಲೋಪ ದೋಷಗಳ ಬಗ್ಗೆ ಉಲ್ಲೇಖಿಸಿ ಸಿಬಿಐ ಬಂದಿಸಿದ್ದ ಆರೋಪಿ ಈ ಕೃತ್ಯ ನಡೆಸಿರಲು ಸಾದ್ಯವಿಲ್ಲ ಎಂದು ಅಭಿಪ್ರಾಯಪಟ್ಟಿತ್ತು.
ಈ ಕುರಿತು ಧರ್ಮಸ್ಥಳದ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರು ಮೊದಲಿನಿಂದಲೂ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಅವರ ಸಂಬಂಧಿಕರಾದ ಧೀರಜ್ ಕೆಲ್ಲ, ಉದಯ್ ಜೈನ್ ಮತ್ತು ಮಲ್ಲಿಕ್ ಜೈನ್ ಅವರೇ ಈ ಕೃತ್ಯ ನಡೆಸಿದ್ದಾರೆಂದು ಆರೋಪ ಮಾಡಿದ್ದರು. ಸೌಜನ್ಯಾ ಅವರ ಪೋಷಕರೂ ಮತ್ತು ಕುಟುಂಬಸ್ಥರೂ ಸಂತೋಷ್ ರಾವ್ ಈ ಕೃತ್ಯ ನಡೆಸಿಲ್ಲ ಎಂದು ಸುದ್ದಿ ಗೋಷ್ಠಿಯಲ್ಲಿ ಆರೋಪಿಸಿದ್ದು ಮೇಲಿನ ಮೂವರ ಮೇಲೆಯೇ ಸಂಶಯ ವ್ಯಕ್ತಪಡಿಸಿದ್ದರು.
ಇಂದು ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಧೀರಜ್ ಕೆಲ್ಲ ಅವರು ಮಾತನಾಡಿ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಇತರರು ನಮ್ಮ ವಿರುದ್ದ ಆರೋಪ ಮಾಡಿದ್ದರು. ಹಣ ಗಳಿಕೆಯ ಏಕೈಕ ಉದ್ದೇಶದಿಂದ ತಿಮರೋಡಿ ಆರೋಪ
ಮಾಡುತಿದ್ದಾರೆ. ನಾವು ಅವರನ್ನು ಕಾನತ್ತೂರು ದೈವದ ಮೊರೆ ಹೋಗಿ ಆಣೆಗೆ ಕರೆದಿದ್ದೆವು, ಆದರೆ ಅದನ್ನು ತಪ್ಪಿಸಿದ್ದರು ಎಂದರು.
2014 ರ ಜುಲೈ ಹಾಗೂ ಆಗಸ್ಟ್ ನಲ್ಲಿ ಸಿಬಿಐ (CBI) ನಮ್ಮನ್ನು ಎರಡೆರೆಡು ಬಾರಿ ಬೆಳ್ತಂಗಡಿಯಲ್ಲಿ ತನಿಖೆ ಮಾಡಿತ್ತು. ಚೆನ್ನೈ, ಬೆಂಗಳೂರಿಗೂ ಕರೆಸಿ ನಮ್ಮನ್ನು ತನಿಖೆ ಮಾಡಿದ್ದಾರೆ. ನಮ್ಮ ರಕ್ತದ ಪರೀಕ್ಷೆ, ಡಿಎನ್ಎ ಪರೀಕ್ಷೆ, ಮಂಪರು ಪರೀಕ್ಷೆ (ಬ್ರೈನ್ ಮ್ಯಾಪಿಂಗ್) ಕೂಡ ಸಿಬಿಐ ಮಾಡಿದೆ.
ಬೆಂಗಳೂರಿಗೂ ಕರೆಸಿ ನಮ್ಮ ತನಿಖೆ ಮಾಡಿದ್ದಾರೆ. ನಮ್ಮ ರಕ್ತ ಪರೀಕ್ಷೆ, ಡಿಎನ್ಎ ಪರೀಕ್ಷೆ, ಮಂಪರು ಪರೀಕ್ಷೆ (ಬ್ರೈನ್ ಮ್ಯಾಪಿಂಗ್) ಕೂಡ ಸಿಬಿಐ ಮಾಡಿದೆ. ಮೊಬೈಲ್ ಲೊಕೇಶನ್ ಟ್ರೇಸ್, ಸುಳ್ಳು ಪತ್ತೆಯ ಪಾಲಿಗ್ರಾಫ್ ಟೆಸ್ಟ್ ಜೊತೆ ಅನೇಕ ವೈಜ್ಞಾನಿಕ ಪರೀಕ್ಷೆ ಮಾಡಲಾಗಿದೆ.
ಇದೀಗ ಇಡೀ ಕೇಸ್ ನಲ್ಲಿ ಸಿಬಿಐ ಕೋರ್ಟ್ ತೀರ್ಪು ಕೊಟ್ಟಿದೆ. ಹೀಗಿದ್ದರೂ ಮಹೇಶ್ ಶೆಟ್ಟಿ ಮತ್ತೆ ನಮ್ಮ ವಿರುದ್ದ ಆರೋಪ ಮಾಡ್ತಿದಾರೆ. ಮಾಧ್ಯಮಗಳ ಎದುರು ಬಂದು ನಮ್ಮ ವಿರುದ್ದ ಆರೋಪ ಮಾಡುತಿದ್ದಾರೆ. ಹೀಗಾಗಿ ನಾವು ಮತ್ತೆ ಅವರನ್ನು ಆಣೆ ಪ್ರಮಾಣಕ್ಕೆ ಕರೀತಾ ಇದೇವೆ. ಕಾನತ್ತೂರು ನಾಲ್ವರ್ ದೈವಗಳ ಎದುರು ಬಂದು ಆಣೆ ಮಾಡಲಿ ಎಂದರು.
ಮಲ್ಲಿಕ್ ಜೈನ್ ಮಾತನಾಡಿ, ಆರೋಪಿ ಸಂತೋಷ್ ನನ್ನ ನಾವು ಕಳ್ಳತನದ ಸಂಶಯದ ಮೇಲೆ ಪೊಲೀಸರಿಗೆ ಹಿಡಿದು ಕೊಟ್ಟೆವು .ಆದರೆ ಪೊಲೀಸರು ಅವನನ್ನ ಅರೆಸ್ಟ್ ಮಾಡಿದ್ದು, ನಾವು ಅವನೇ ಸೌಜನ್ಯ ಕೊಲೆ ಆರೋಪಿ ಅಂತ ಹೇಳಿಲ್ಲ, ಅದು ನಮಗೆ ಸಂಬಂಧಿಸಿದ್ದಲ್ಲ. ಎಂದರು.
ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದ ಮಾಜಿ ಸಚಿವ ಅಭಯ ಚಂದ್ರ ಜೈನ್ ಮಾತನಾಡಿ , ಮಹೇಶ್ ಶೆಟ್ಟಿ ತಿಮರೋಡಿ ಇದೀಗ ಮತ್ತೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ವಿರುದ್ದ ಮಾತನಾಡ್ತಿದಾರೆ ಎಂದು ತಿಮರೋಡಿ ವಿರುದ್ಧ ಗುಡುಗಿದರು. ಆತ ಒಬ್ಬ ರೌಡಿಶೀಟರ್, ತಿಮರೋಡಿ ಬೆಳ್ತಂಗಡಿ ತಾಲೂಕಿನ ಕೆಟ್ಟ ವ್ಯಕ್ತಿ. ಅವನ ಈ ಹೇಳಿಕೆಗಳ ವಿರುದ್ಧ ನಾವು ಪ್ರತಿಭಟಿಸುತ್ತೇವೆ ಎಂದು ಹೇಳಿದರು. ತಿಮರೋಡಿ ನೈಜ ಆರೋಪಿಗಳ ಪತ್ತೆಗೆ ಐಜಿ ಕಚೇರಿ ಎದುರು ಹೋರಾಟ ಮಾಡಲಿ. ಯಾರೋ ದೊಡ್ಡ ವ್ಯಕ್ತಿ ವಿರುದ್ದ ಮಾತನಾಡುವುದಲ್ಲ. ಜೈನ ಸಮುದಾಯದ ಕ್ಕೂ ಮಹೇಶ್ ಶೆಟ್ಟಿ ತಿಮರೋಡಿ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದರು.