ಮಾರುಕಟ್ಟೆಯಲ್ಲಿ ದಿನ ದಿನ ಹೊಸ ಹೊಸ ಸ್ಮಾರ್ಟ್ ಫೋನ್ ಗಳ ಪರಿಚಯ ಮಾಡುತ್ತಿರುತ್ತಾರೆ. ಅದರಲ್ಲಿ ಸ್ಯಾಮ್ ಸಂಗ್ ಕಂಪನಿಯು ತುಂಬಾ ಪ್ರಸಿದ್ಧವಾಗಿದೆ. ಆ ಕಂಪನಿಯ ಗ್ಯಾಲಕ್ಸಿ M34 ಸಾಕಷ್ಟು ಅಭಿವೃದ್ದಿ ಪಡಿಸಿ ಮಾರುಕಟ್ಟೆಗೆ ತರಲಿದೆ. ಇದರಲ್ಲಿ 120Hz ನ ಸೂಪರ್ ಅಮೊಲೊಡ್ ಡಿಸ್ ಪ್ಲೇ ನೀಡಲಾಗಿದೆ. 50 ಮೆಗಾ ಪಿಕ್ಸೆಕ್ ಪ್ರೈಮರಿ ಸೆನ್ಸಾರ್ನ ಕ್ಯಾಮೆರಾ ನೀಡಲಾಗಿದೆ.
ದಕ್ಷಿಣ ಕೊರಿಯಾ ಮೂಲದ ಪ್ರಸಿದ್ಧ ಟೆಕ್ ಸಂಸ್ಥೆ ಸ್ಯಾಮ್ಸಂಗ್ ತನ್ನ ಹೊಸ ಗ್ಯಾಲಕ್ಸಿ ಎಮ್34 5ಜಿ ಸ್ಮಾರ್ಟ್ಫೋನ್ನ ಬಿಡುಗಡೆ ದಿನಾಂಕವನ್ನು ಬಹಿರಂಗ ಪಡಿಸಿದೆ. ಬರೋಬ್ಬರಿ 6,000mAh ಬ್ಯಾಟರಿ ಸಾಮರ್ಥ್ಯ ಹೊಂದಿರುವ ಈ ಸ್ಮಾರ್ಟ್ಫೋನ್ ಇದೇ ಜುಲೈ 7 ರಂದು ಭಾರತದ ಮಾರುಕಟ್ಟೆಗೆ ಎಂಟ್ರಿ ಕೊಡಲಿದೆ.
ಈ ಫೋನನ್ನು ಸತತವಾಗಿ ಉಪಯೋಗಿಸುತ್ತಿದ್ದರೂ ಎರಡು ದಿನಗಳ ಕಾಲ ಬ್ಯಾಟರಿ ಬ್ಯಾಕಪ್ ಬರಲಿದೆ ಎಂದು ಕಂಪನಿ ಖಚಿತತೆ ನೀಡುತ್ತದೆ. ಗ್ಯಾಲಕ್ಸಿ M34 5G ಸ್ಮಾರ್ಟ್ಫೋನ್ ಸ್ಯಾಮ್ಸಂಗ್ನ ಭಾರತದ ಅಧಿಕೃತ ವೆಬ್ಸೈಟ್ ಮತ್ತು ಅಮೆಜಾನ್ ಮೂಲಕ ಸೇಲಿಂಗ್ ಗೆ ಬರಲಿದೆ. ಯಾಲಕ್ಸಿ M33 5G ಫೋನಿಗಿಂತ ಗ್ಯಾಲಕ್ಸಿ M34 ಸಾಕಷ್ಟು ಅಭಿವೃದ್ದಿ ಹೊಂದಿದೆ. ಇದರಲ್ಲಿ 120Hz ನ ಸೂಪರ್ ಅಮೊಲೊಡ್ ಡಿಸ್ ಪ್ಲೇ ನೀಡಲಾಗಿದೆ. 50 ಮೆಗಾ ಪಿಕ್ಸೆಕ್ ಪ್ರೈಮರಿ ಸೆನ್ಸಾರ್ನ ಕ್ಯಾಮೆರಾ ನೀಡಲಾಗಿದೆ. ವಿಶೇಷ ಎಂದರೆ ಈ ಫೋನ್ನಲ್ಲಿ ಫೋಟೋ ತೆಗೆಯುವಾಗ ಅಥವಾ ವಿಡಿಯೋ ಮಾಡುವಾಗ ಕೈ ಶೇಕ್ ಆದರೂ ಅದ್ಭುತವಾಗಿ ಸೆರೆ ಹಿಡಿಯಲಾಗುತ್ತದೆ ಅಂತೆ.
ನೈಟೋಗ್ರಫಿ ಎಂಬ ವಿಶೇಷ ಆಯ್ಕೆ ಕೂಡ ಇದರಲ್ಲಿ ನೀಡಲಾಗಿದ್ದು, ರಾತ್ರಿಯಲ್ಲಿ ಉತ್ತಮ ಫೋಟೋ ಕ್ಲಿಕ್ ಮಾಡಬಹುದು. ಸ್ಯಾಮ್ಸಂಗ್ ಗ್ಯಾಲಕ್ಸಿ M34 5G ಸ್ಮಾರ್ಟ್ಫೋನ್ನ ಬೆಲೆ ಎಷ್ಟಿರಬಹುದು ಎಂಬುದು ಬಹಿರಂಗವಾಗಿಲ್ಲ. ಆದರೆ, ಒಟ್ಟು ಎರಡು ಸ್ಟೋರೆಜ್ ಮಾದರಿಯಲ್ಲಿ ಬಿಡುಗಡೆ ಆಗಲಿದೆ. 8GB RAM ಮತ್ತು 128GB ಸ್ಟೋರೇಜ್ ಮತ್ತು 8GB RAM ಮತ್ತು 256GB ಸ್ಟೋರೇಜ್ ಆವೃತ್ತಿಯಲ್ಲಿ ಬರುವ ನಿರೀಕ್ಷೆಯಿದೆ. ಈ ಫೋನಿನ ಬೆಲೆ 30,000 ರೂ. ಇರಬಹುದು ಎಂದು ಅಂದಾಜಿಸಲಾಗಿದೆ.
ಈ ಫೋನಿನ ಫೀಚರ್ಸ್ ಬಗ್ಗೆ ಹೇಳುವುದಾದರೆ, 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7 ಇಂಚಿನ ಸೂಪರ್ ಅಮೊಲೊಡ್ ಡಿಸ್ಪ್ಲೇ ಹೊಂದಿರಲಿದೆ. 120Hz ರಿಫ್ರೆಶ್ರೇಟ್ನಿಂದ ಕೂಡಿರಲಿದೆ. ಸ್ಯಾಮ್ಸಂಗ್ ಎಕ್ಸಿನೋಸ್ 1280 SoC ಪ್ರೊಸೆಸರ್ ವೇಗವನ್ನು ಪಡೆದುಕೊಂಡಿರಲಿದ್ದು, ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಮೆಮೊರಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ಅದರಲ್ಲಿದೆ.
ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ, ಈ ಸ್ಮಾರ್ಟ್ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಇರಲಿದೆ. ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಅನ್ನು ಒಳಗೊಂಡಿದೆ. ಇದಲ್ಲದೆ ಮುಂಭಾಗ ಸೆಲ್ಫೀ ಮತ್ತು ವಿಡಿಯೋ ಕರೆಗಳಿಗಾಗಿ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಕ್ಯಾಮೆರಾ ಒಳಗೊಂಡಿದೆ ಎಂದು ಊಹಿಸಲಾಗುತ್ತಿದೆ.
ಸ್ಯಾಮ್ಸಂಗ್ ಗ್ಯಾಲಕ್ಸಿ M34 5G ಸ್ಮಾರ್ಟ್ಫೋನ್ನಲ್ಲಿ ದೀರ್ಘ ಸಮಯ ಬಾಳಿಕೆ ಬರುವ 6,000mAh ಸಾಮರ್ಥ್ಯದ ಬ್ಯಾಟರಿ ಇರುವುದರಿಂದ ಇದು ತುಂಬಾ ಪ್ರಸಿದ್ಧಿ ಆಗುವ ಸಾಧ್ಯತೆ ಇದೆ. ಇದು 25W ವೇಗದ ಚಾರ್ಜಿಂಗ್ಗೆ ಬೆಂಬಲವನ್ನು ಹೊಂದಿರುತ್ತದೆ ಎಂದು ನಿರೀಕ್ಷಿಸಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G ಬೆಂಬಲ ಪಡೆದುಕೊಂಡಿದೆ. ಉಳಿದಂತೆ Wi-Fi, ಬ್ಲೂಟೂತ್, GPS, ಹಾಟ್ಸ್ಪಾಟ್, ಯುಎಸ್ಬಿ ಟೈಪ್ ಸಿ ಪೊರ್ಟ್, ಹೆಡ್ಫೋನ್ ಜ್ಯಾಕ್ ಅನ್ನು ಒಳಗೊಂಡಿರಬಹುದು ಎಂದು ಕಂಪನಿಯ ಮೂಲಗಳು ತಿಳಿಸಿವೆ.