ಆಗಸ್ಟ್ 15 ರಿಂದ ದೇಶದಾದ್ಯಂತ ಎಲ್ಲಾ ಪಂಚಾಯತ್ಗಳು ಅಭಿವೃದ್ಧಿ ಕಾರ್ಯಗಳಿಗೆ ಮತ್ತು ಆದಾಯ ಸಂಗ್ರಹಣೆಗೆ ಕಡ್ಡಾಯವಾಗಿ ಡಿಜಿಟಲ್ ಪಾವತಿ ವ್ಯವಸ್ಥೆಯನ್ನು ಬಳಸಬೇಕು. ಎಲ್ಲಾ ಪಂಚಾಯತ್ಗಳು ಯುಪಿಐ ಸೇವೆ ಹೊಂದಿವೆ ಎಂದು ಘೋಷಿಸಬೇಕು ಎಂದು ಪಂಚಾಯತ್ ರಾಜ್ ಸಚಿವಾಲಯ ಸೂಚನೆ ನೀಡಿದೆ.
ಮುಖ್ಯಮಂತ್ರಿ, ಶಾಸಕರು ಮತ್ತು ಸಂಸದರ ಸಮ್ಮುಖದಲ್ಲಿ ರಾಜ್ಯಗಳು ಯುಪಿಐ ಪಂಚಾಯತ್ಗಳನ್ನು ಘೋಷಿಸಬೇಕು ಎಂದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಬರೆದಿರುವ ಪತ್ರದಲ್ಲಿ ಪಂಚಾಯತ್ ರಾಜ್ ಸಚಿವಾಲಯದ ಕಾರ್ಯದರ್ಶಿ ಸುನೀಲ್ ಕುಮಾರ್ ಹೇಳಿದ್ದಾರೆ.
ಸುಮಾರು ಶೇ. 98 ರಷ್ಟು ಪಂಚಾಯತ್ ಗಳು ಈಗಾಗಲೇ ಯುಪಿಐ ಆಧಾರಿತ ಪಾವತಿಗಳನ್ನು ಬಳಸಲು ಪ್ರಾರಂಭಿಸಿವೆ. ಸಾರ್ವಜನಿಕ ಹಣಕಾಸು ನಿರ್ವಹಣಾ ವ್ಯವಸ್ಥೆ (ಪಿಎಂಎಫ್ಎಸ್) ಮೂಲಕ ಸುಮಾರು 1.5 ಲಕ್ಷ ಕೋಟಿ ರೂ. ಪಾವತಿ ಮಾಡಲಾಗಿದೆ. ಪಂಚಾಯತ್ಗಳಲ್ಲಿ ಪಾವತಿಯನ್ನು ಈಗ ಡಿಜಿಟಲ್ ರೂಪದಲ್ಲಿ ಮಾಡಲಾಗುತ್ತದೆ. ಚೆಕ್ ಮತ್ತು ನಗದು ಪಾವತಿಯನ್ನು ಬಹುತೇಕ ನಿಲ್ಲಿಸಲಾಗಿದೆ ಎಂದು ಸುನಿಲ್ ಕುಮಾರ್ ತಿಳಿಸಿದ್ದಾರೆ.
ಕಡ್ಡಾಯವಾಗಿ ಡಿಜಿಟಲ್ ಪಾವತಿ ವ್ಯವಸ್ಥೆಯು ಈಗ ಸಾರ್ವತ್ರಿಕ ವ್ಯಾಪ್ತಿಯನ್ನು ಹೊಂದಿದೆ. ಜೂನ್ 30 ರಂದು ಸೇವಾ ಪೂರೈಕೆದಾರರು ಮತ್ತು ಮಾರಾಟಗಾರರೊಂದಿಗೆ ಸಭೆ ನಡೆಸುವಂತೆ ಪಂಚಾಯತ್ಗಳಿಗೆ ತಿಳಿಸಲಾಗಿದೆ.
ಯುಪಿಐ ಪ್ಲಾಟ್ಫಾರ್ಮ್ಗಳಾದ GPay, PhonePay, Paytm, BHIM, Mobikwik, WhatsApp Pay, Amazon Pay ಮತ್ತು Bharat Pe ನಿಂದ ಸಂಪರ್ಕಿತ ವ್ಯಕ್ತಿಗಳ ವಿವರಗಳೊಂದಿಗೆ ಪಟ್ಟಿಯನ್ನು ಸಚಿವಾಲಯವು ಹಂಚಿಕೊಂಡಿದೆ. ಜುಲೈ 15 ರೊಳಗೆ ಪಂಚಾಯತ್ಗಳು ಸೂಕ್ತ ಸೇವಾ ಪೂರೈಕೆದಾರರನ್ನು ಆಯ್ಕೆ ಮಾಡಬೇಕು ಮತ್ತು ಜುಲೈ 30 ರೊಳಗೆ ಮಾರಾಟಗಾರರನ್ನು ಅಂತಿಮಗೊಳಿಬೇಕು ಎಂದು ಸಚಿವಾಲಯವು ಮಾರ್ಗಸೂಚಿಯಲ್ಲಿ ತಿಳಿಸಿದೆ.