ಸದಾ ವಿಭಿನ್ನ ಸಿನಿಮಾಗಳನ್ನು ನಿರ್ಮಾಣ ಮಾಡುವ ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ನಿರ್ಮಾಣ ಸಂಸ್ಥೆ ಪಿಆರ್ಕೆ ಪ್ರೊಡಕ್ಷನ್ಸ್ ಇದೀಗ ಹೊಸ ಸಿನಿಮಾ ಮೂಲಕ ಪ್ರೇಕ್ಷಕರ ಮುಂದೆ ಬರಲು ಸಿದ್ಧತೆ ನಡೆಸಿದೆ. ಪಿಆರ್ಕೆಬ್ಯಾನರ್ ಮೂಲಕ ತಯಾರಾಗಿರುವ ‘ಆಚಾರ್ & ಕೋ’ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಮಾಡಲಾಗಿದೆ.
ಸಿಂಧು ಶ್ರೀನಿವಾಸಮೂರ್ತಿ ಅವರ ಚೊಚ್ಚಲ ನಿರ್ದೇಶನ ಮಾಡಿರುವ ‘ಆಚಾರ್ & ಕೋ’ ಚಿತ್ರ ಇದೇ ಜುಲೈ 28ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.
’ಆಚಾರ್ & ಕೋ’ ಸಿನಿಮಾದಲ್ಲಿ ವಿಶೇಷತೆ ಎಂದರೆ ಈ ಸಿನಿಮಾ ಬಹುತೇಕ ಭಾಗಗಳಲ್ಲಿ ಹೆಚ್ಚಾಗಿ ಮಹಿಳೆಯರೇ ಕೆಲಸ ಮಾಡಿದ್ದಾರೆ. ಸಿನಿಮಾದ ನಿರ್ಮಾಪಕರು, ನಿರ್ದೇಶಕರು, ಸಂಗೀತ ನಿರ್ದೇಶಕರು, ಮುಖ್ಯ ಪಾತ್ರಧಾರಿ, ಸೌಂಡ್ ಇಂಜಿನಿಯರ್, ವಸ್ತ್ರ ವಿನ್ಯಾಸಕರು ಇನ್ನೂ ಹಲವು ವಿಭಾಗಗಳನ್ನು ಮಹಿಳೆಯರೇ ಕೆಲಸ ಮಾಡಿದ್ದಾರೆ. ಅಷ್ಟೇ ಅಲ್ಲದೇ ಆಚಾರ್ & ಕೋ ಚಿತ್ರದ ಲೇಖಕರು ಹಾಗೂ ನಿರ್ದೇಶಕಿಯೂ ಆಗಿರುವ ಸಿಂಧು ಶ್ರೀನಿವಾಸಮೂರ್ತಿ ಈ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
’ಆಚಾರ್ & ಕೋ’ ಸಿನಿಮಾಗೆ ಬಿಂಧು ಮಾಲಿನಿ ನಾರಾಯಣಸ್ವಾಮಿ ಸಂಗೀತ ನೀಡಿದ್ದಾರೆ. ಹಾಗೇ ಇಂಚರಾ ಸುರೇಶ್ ವಸ್ತ್ರ ವಿನ್ಯಾಸ, ಸೌಂಡ್ ಇಂಜಿನಿಯರ್ ಆಗಿ ಹೇಮಾ ಸುವರ್ಣ, ವಿಶ್ವಾಸ್ ಕಶ್ಯಪ್ ಆರ್ಟ್ ಡೈರೆಕ್ಷನ್ ಹಾಗೂ ಅಭಿಮನ್ಯು ಸದಾನಂದ್ ಛಾಯಾಗ್ರಹಣವಿರಲಿದೆ.
ಹಾಡುಗಳು, ಟ್ರೈಲರ್ ಸೇರಿದಂತೆ ಇನ್ನಿತರ ತುಣುಕುಗಳನ್ನು ಮುಂಬರುವ ದಿನಗಳಲ್ಲಿ ಪಿ ಆರ್ ಕೆ ಪ್ರೊಡಕ್ಷನ್ಸ್ನ ಅಧಿಕೃತ ಯೂಟ್ಯೂಬ್ ಚಾನಲ್ಗಳ ಮೂಲಕ ಹಾಗೂ ಪಿ ಆರ್ ಕೆ ಪ್ರೊಡಕ್ಷನ್ಸ್ನ ಅಧಿಕೃತ ವೆಬ್ಸೈಟ್ನಲ್ಲಿ ಬಿಡುಗಡೆಯಾಗಲಿದೆ.
1960 ರ ಕಾಲಘಟ್ಟದಲ್ಲಿ ಬೆಂಗಳೂರಿನಲ್ಲಿ ನಡೆಯುವ ಕಥೆಯನ್ನು ಈ ಚಿತ್ರ ಹೊಂದಿದ್ದು, ಒಂದು ಕುಟುಂಬ ತಮ್ಮ ಕನಸುಗಳನ್ನು ಬೆನ್ನತ್ತುವ ಹಾದಿಯಲ್ಲಿ ಹೇಗೆ ಸವಾಲುಗಳನ್ನು ಎದುರಿಸುತ್ತದೆ, ಸಂಪ್ರದಾಯಗಳನ್ನೂ ಮೀರದೇ ಆಧುನಿಕ ಜಗತ್ತಿನ ಅವಶ್ಯಕತೆಗಳನ್ನೂ ಹೇಗೆ ನಿಭಾಯಿಸಿ ಗೆಲ್ಲುತ್ತದೆ ಎಂಬುದನ್ನು ಹೇಳುವ ಒಂದು ಭಾವನಾತ್ಮಕ ಸಿನಿಮಾವಿದು. ಅರವತ್ತರ ದಶಕದ ಸಾಮಾಜಿಕ ಮತ್ತು ಸಾಂಪ್ರದಾಯಿಕ ವ್ಯವಸ್ಥೆಯಲ್ಲಿ ವಿನೂತನ ಆಲೋಚನೆಯೊಂದನ್ನು ಯಶಸ್ವಿಯಾಗಿಸಲು ಹೋರಾಡುವ ಈ ಚಿತ್ರದಲ್ಲಿ ಭಾವುಕತೆಯಷ್ಟೇ ಹಾಸ್ಯವೂ ಇದೆ, ಆಸಕ್ತಿಕರ ಸನ್ನಿವೇಶಗಳ ಜೊತೆಗೆ ಇಡೀ ಸಮಾಜಕ್ಕೆ ಒಂದು ಪ್ರೇರಣೆಯೂ ಇದೆ