ರಾಕಿಂಗ್ ಸ್ಟಾರ್ ಯಶ್ ಈಗ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ಈಗ ‘ಕೆಜಿಎಫ್ 1’ ಹಾಗೂ ‘ಕೆಜಿಎಫ್ 2’ ಚಿತ್ರ ಜಪಾನಿ ಭಾಷೆಗೆ ಡಬ್ ಮಾಡಿ ಅಲ್ಲಿನ ಅಭಿಮಾನಿಗಳಿಗೂ ರಸದೌತಣ ನೀಡಲಿದ್ದಾರೆ.
ಯಶ್ಗೆ ವಿಶ್ವಾದ್ಯಂತ ಅಭಿಮಾನಿಗಳಿದ್ದಾರೆ. ಈ ಕಾರಣಕ್ಕೆ ‘ಕೆಜಿಎಫ್ 2’ ಸಿನಿಮಾ ಹಲವು ರಾಷ್ಟ್ರಗಳಲ್ಲಿ ರಿಲೀಸ್ ಮಾಡಲಾಗಿತ್ತು. ಈಗ ಅವರ ನಟನೆಯ ‘ಕೆಜಿಎಫ್’ ಹಾಗೂ ‘ಕೆಜಿಎಫ್ 2’ ಸಿನಿಮಾ ಜಪಾನ್ನಲ್ಲಿ ರಿಲೀಸ್ ಆಗುತ್ತಿದೆ. ಈ ಕುರಿತಂತೆ ಅವರು ವಿಡಿಯೋ ಒಂದನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.
ಜಪಾನಲ್ಲಿರುವ ಅಭಿಮಾನಿಗಳ ಜೊತೆ ಜಪಾನಿ ಭಾಷೆಯಲ್ಲಿ ಅವರು ಮಾತನಾಡಿದ್ದಾರೆ. ಇದು ತುಂಬಾ ವಿಶೇಷವಾಗಿದ್ದು, ಈ ವಿಡಿಯೋ ಅಭಿಮಾನಿಗಳ ವಲಯದಲ್ಲಿ ವೈರಲ್ ಆಗುತ್ತಿದೆ.ಯಶ್ ಈಗ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ಅವರ ವೃತ್ತಿಬದುಕನ್ನೇ ಬದಲಿಸಿದ್ದು ‘ಕೆಜಿಎಫ್ 2’ ಸಿನಿಮಾ. ಈ ಚಿತ್ರ ರಿಲೀಸ್ ಆಗಿ ವರ್ಷ ಕಳೆದಿದೆ. ಆದಾಗ್ಯೂ ಅವರ ಹೊಸ ಸಿನಿಮಾ ಘೋಷಣೆ ಆಗಿಲ್ಲ. ಹೀಗಿರುವಾಗಲೇ ‘ಕೆಜಿಎಫ್ 1’ ಹಾಗೂ ‘ಕೆಜಿಎಫ್ 2’ ಚಿತ್ರ ಜಪಾನಿ ಭಾಷೆಗೆ ಡಬ್ ಆಗಿ ಅಲ್ಲಿನ ಥಿಯೇಟರ್ನಲ್ಲಿ ಬಿಡುಗಡೆ ಆಗುತ್ತಿದೆ. ಈ ಮೂಲಕ ಚಿತ್ರದ ಗಳಿಕೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಮೂಲಗಳು ತಿಳಿಸಿವೆ.
ಈ ಬಗ್ಗೆ ವಿಡಿಯೋ ಮಾಡಿರುವ ಯಶ್ ಆರಂಭದಲ್ಲಿ ಜಪಾನಿ ಭಾಷೆಯಲ್ಲಿ ಮಾತನಾಡಿದ್ದಾರೆ. ‘ನಮಸ್ತೆ ಜಪಾನ್. ನನ್ನ ‘ಕೆಜಿಎಫ್ 1’ ಹಾಗೂ ‘ಕೆಜಿಎಫ್ 2’ ಸಿನಿಮಾ ಜಪಾನ್ನಲ್ಲಿ ರಿಲೀಸ್ ಆಗುತ್ತಿದೆ. ‘ಕೆಜಿಎಫ್’ ಸಿನಿಮಾದಲ್ಲಿ ಸಾಕಷ್ಟು ಮನರಂಜನೆ ಹಾಗೂ ಆ್ಯಕ್ಷನ್ ಗಳ ಸರಮಾಲೆ ಇದೆ. ಮ್ಯಾಡ್ನೆಸ್ ಕೂಡ ಇದೆ. ತಪ್ಪದೇ ಸಿನಿಮಾ ನೋಡಿ’ ಎಂದು ಜಪಾನಿಯ ಜನಗಳ ಬಳಿ ಕೇಳಿಕೊಂಡಿದ್ದಾರೆ.
ಜಪಾನ್ನಲ್ಲಿ ಭಾರತೀಯ ಸಿನಿಮಾಗಳಿಗೆ ಹೆಚ್ಚಿನ ಬೇಡಿಕೆ ಇದೆ. ಈಗ ‘ಕೆಜಿಎಫ್’ ಸಿನಿಮಾ ಕೂಡ ಇದೇ ಸಾಲಿಗೆ ಸೇರುತ್ತಿದೆ. ಜಪಾನ್ ಭಾಷೆಗೆ ಡಬ್ ಆಗಿ ತೆರೆಗೆ ಬರುತ್ತಿರುವ ಮೊದಲ ಕನ್ನಡ ಸಿನಿಮಾ ಇದು ಎಂಬುದು ವಿಶೇಷ ಹೆಗ್ಗಳಿಕೆಗೆ ಪಾತ್ರವಾಗಿದೆ.