ಧಾರವಾಡ: ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಅಸಮಾಧಾನದ ಬೆನ್ನಲ್ಲೇ ಬಿಜೆಪಿಯಲ್ಲಿ ರಾಜೀನಾಮೆ ಪರ್ವ ಆರಂಭಗೊಂಡಿದೆ. ಧಾರವಾಡ ಮಾಹಾನಗರ ಫಲಾನುಭವಿಗಳ ಪ್ರಕೋಷ್ಠದ ಸಂಚಾಲಕ ಹನಮಂತಪ್ಪ ದೊಡ್ಡಮನಿ ರಾಜೀನಾಮೆ ನೀಡಿದ್ದಾರೆ.
ಹನಮಂತಪ್ಪ ದೊಡ್ಡಮನಿ ಬಿಜೆಪಿ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ವಾಟ್ಸಪ್ ಮೂಲಕ ಹು-ಧಾ ಮಾಹಾನಗರ ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ್ ಕಪಟಕರ್ ಅವರಿಗೆ ರಾಜೀನಾಮೆ ಮಾಹಿತಿಯನ್ನು ರವಾನಿಸಿದ್ದಾರೆ.
ಹನುಮಂತಪ್ಪ ದೊಡ್ಡಮನಿ ಮಾಜಿ ಸಿಎಮ್ ಜಗದೀಶ್ ಶೆಟ್ಟರ್ ಆಪ್ತರಾಗಿದ್ದಾರೆ. ಪ್ರದೀಪ ಶೆಟ್ಟರ್ ಅಸಮಾಧಾನ ಬೆನ್ನಲ್ಲೇ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆ.
ಬಿಜೆಪಿಯಲ್ಲಿ ಸದ್ದಿಲ್ಲದೆ ಅತೃಪ್ತರ ಬಣ ಒಂದಾಗ್ತಿದೆ. ಇಂಥದ್ದೊಂದು ಬೆಳವಣಿಗೆ ಬಿಜೆಪಿಯಲ್ಲಿ ಜೋರಾಗಿಯೇ ನಡೆದಿದೆ. ಮೊನ್ನೆ ಮಾಜಿ ಸಚಿವ ಶಂಕರ್ ಪಾಟೀಲ ಮುನೇನಕೊಪ್ಪ ಅತೃಪ್ತಿ ವ್ಯಕ್ತಪಡಿಸಿದ್ದರು.
ಈಗ ಪ್ರದೀಪ್ ಶೆಟ್ಟರ್ ಅತೃಪ್ತಿ ವ್ಯಕ್ತಪಡಿಸಿದ್ದಾರೆ. ನಾಳೆ ಮತ್ತಿನ್ಯಾರು ಅನ್ನೋ ಪ್ರಶ್ನೆ ಬಿಜೆಪಿ ಹಿರಿಯ ನಾಯಕರನ್ನು ಕಾಡಲಾರಂಭಿಸಿದೆ.