ಎನ್ ಟಿ ಆರ್ ಜಿಲ್ಲೆಯಲ್ಲಿ ಆಂಧ್ರ ಪ್ರದೇಶದ ಪೊಲೀಸರು ಜನಸೇನಾ ಪಕ್ಷದ ಅಧ್ಯಕ್ಷ ಪವನ್ ಕಲ್ಯಾಣ್ ಮತ್ತು ಹಿರಿಯ ನಾಯಕ ನಾದೆಂಡ್ಲಾ ಮನೋಹರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪವನ್ ಕಲ್ಯಾಣ್ ಅವರು ಶನಿವಾರ ನಡೆದ ಮುಂಜಾನೆ ಕಾರ್ಯಾಚರಣೆಯಲ್ಲಿ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರ ಬಂಧನವನ್ನು ಖಂಡಿಸಿದರು ಮತ್ತು ಮಾಜಿ ಮುಖ್ಯಮಂತ್ರಿಯನ್ನು ಬೆಂಬಲಿಸಲು ವಿಜಯವಾಡಕ್ಕೆ ವಿಶೇಷ ವಿಮಾನದ ಮೂಲಕ ತೆರಳಲು ಸಿದ್ಧತೆಯಲ್ಲಿದ್ದರು. ಇದೇ ವೇಳೆ ಪೊಲೀಸರು ಪವನ್ ಕಲ್ಯಾಣ್ ಅವರ ವಿಮಾನಯಾನವನ್ನು ತಪ್ಪಿಸುವಲ್ಲಿ ಯಶಸ್ವಿಯಾದರು.
ಆದರೆ ಬಳಿಕ ರಸ್ತೆ ಮಾರ್ಗವಾಗಿ ಸಂಚರಿಸಲು ನಿರ್ಧರಿಸಿದ್ದರು, ಈ ಸಮಯದಲ್ಲಿ ಪವನ್ ಕಲ್ಯಾಣ್ ರ ಬೆಂಗಾವಲು ವಾಹನವನ್ನು ತಡೆಹಿಡಿಯಲಾಗಿದ್ದು, ಇದಕ್ಕೆ ವಿರೋಧಿಸಿ ಪವನ್ ಕಲ್ಯಾಣ್ ರಸ್ತೆಯಲ್ಲೇ ಮಲಗಿ ಪ್ರತಿಭಟನೆಗೆ ಮುಂದಾಗಿದ್ದರು.
ಹಾಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಪವನ್ ಕಲ್ಯಾಣ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಸದ್ಯ ಅವರನ್ನು ವಿಜಯವಾಡಕ್ಕೆ ಸ್ಥಳಾಂತರಿಸಲಾಗಿದ್ದುಮ ಅವರ ವಿರುದ್ದ ಯಾವುದೇ ಪ್ರಕರಣ ದಾಖಲು ಮಾಡಲಾಗಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.