ಬೆಂಗಳೂರು: ಗೌರಿ ಗಣೇಶ ಹಬ್ಬದ ಹಿನ್ನಲೇ ಸಾಲು ಸಾಲು ರಜೆ ಇರುವುದರಿಂದ ಕೆಎಸ್ಆರ್ ಟಿಸಿ ಬೆಂಗಳೂರಿನಿಂದ ರಾಜ್ಯದ ವಿವಿಧ ಸ್ಥಳಗಳಿಗೆ 1200 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಸಪ್ಟೆಂಬರ್ 15 ರಿಂದ 18ವರೆಗೂ ಈ ವಿಶೇಷ ಬಸ್ಗಳು ಸಂಚಾರ ನಡೆಸಲಿವೆ.
ಸೆಪ್ಟೆಂಬರ್ 15, 16 ಹಾಗೂ 17 ವಾರಾಂತ್ಯ ದಿನಗಳು ಹಾಗೂ ಸೆಪ್ಟೆಂಬರ್ 18 ಗೌರಿ ಗಣೇಶ ಹಬ್ಬವಿದೆ. ಪ್ರತಿ ವರ್ಷದಂತೆಯೇ ಈ ವರ್ಷವೂ ಕೆಎಸ್ಆರ್ಟಿಸಿ ಹಬ್ಬದ ಸಂದರ್ಭದಲ್ಲಿ ಹೆಚ್ಚುವರಿ ಬಸ್ಗಳ ವ್ಯವಸ್ಥೆ ಮಾಡಿದೆ. ಈ ಹಿಂದಿನ ವರ್ಷಗಳಿಗೆ ಹೋಲಿಸಿದರೆ 200 ಹೆಚ್ಚುವರಿ ಬಸ್ಳನ್ನು ರಸ್ತೆಗಿಳಿಸುತ್ತಿವೆ.
ಕೆಂಪೇಗೌಡ ಬಸ್ ನಿಲ್ದಾಣದಿಂದ (ಮೆಜೆಸ್ಟಿಕ್) ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರ್, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ