ಐಪಿಎಲ್ 2024 ಆರಂಭವಾಗುವ ಮುನ್ನ ಈಗಾಗಲೇ ತಂಡದಲ್ಲಿ ಸಾಕಷ್ಟು ಬದಲಾವಣೆಗಳನ್ನು ಆರ್ ಸಿಬಿ ನಡೆಸುತ್ತಿದೆ. ಹೌದು, ಆರ್ ಸಿಬಿ ತನ್ನ ತಂಡದ ನೂತನ ನಿರ್ದೇಶಕರನ್ನು ನೇಮಕ ಮಾಡಿದೆ.
ಆರ್ ಸಿಬಿ ತನ್ನ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿರುವ ಫ್ರಾಂಚೈಸ್, ಇಂಗ್ಲೆಂಡ್ ತಂಡದ ಪ್ರದರ್ಶನ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ ಮೊ ಬೊಬಾಟ್ ಅವರನ್ನು ನೂತನ ನಿರ್ದೇಶಕರನ್ನಾಗಿ ನೇಮಕ ಮಾಡಿರುವುದಾಗಿ ತಿಳಿಸಿದೆ.
ಈ ಹಿಂದೆ ಈ ಸ್ಥಾನವನ್ನು ಮೈಕ್ ಹೆಸ್ಸನ್ ನಿರ್ವಹಿಸಿದ್ದರು. ಪ್ರಸ್ತುತ ವರ್ಷದಲ್ಲಿ ಇಸಿಬಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬೊಬಾಟ್ ಮುಂದಿನ ವರ್ಷದ ಆರಂಭದಲ್ಲಿ ಇಸಿಬಿಯಲ್ಲಿ ತಮ್ಮ ಸ್ಥಾನವನ್ನು ತೊರೆದು ಆರ್ಸಿಬಿ ಸೇರಿಕೊಳ್ಳಲಿದ್ದಾರೆ.
2019 ರಿಂದ ಇಂಗ್ಲೆಂಡ್ ಕ್ರಿಕೆಟ್ ತಂಡದ ಪ್ರದರ್ಶನ ನಿರ್ದೇಶಕರಾಗಿ ಸೇವೆ ಸಲ್ಲಿಸಿರುವ ಬೊಬಾಟ್, 12 ವರ್ಷಗಳ ಕಾಲ ಇಸಿಬಿ ಸೆಟಪ್ನ ಭಾಗವಾಗಿದ್ದಾರೆ. ಈ ಸಮಯದಲ್ಲಿ ಇಂಗ್ಲೆಂಡ್ ಟಿ20 ಮತ್ತು ಏಕದಿನ ವಿಶ್ವಕಪ್ಗಳನ್ನು ಎತ್ತಿಹಿಡಿದಿದೆ.
ನಾನು ಆರ್ ಸಿಬಿ ತಂಡದವನ್ನು ಕ್ರಿಕೆಟ್ ನಿರ್ದೇಶಕನಾಗಿ ಸೇರಲು ಉತ್ಸುಕನಾಗಿದ್ದೇನೆ. ಆರ್ಸಿಬಿ ಪ್ರಪಂಚದಾದ್ಯಂತ ಅಭಿಮಾನಿಗಳನ್ನು ಹೊಂದಿದೆ. ಅವರಿಗೆ ಸೇವೆ ಸಲ್ಲಿಸಲು ಇದು ದೊಡ್ಡ ಗೌರವವಾಗಿದೆ. ಆಂಡಿ ಫ್ಲವರ್ ಅವರೊಂದಿಗೆ ನಿಕಟವಾಗಿ ಕೆಲಸ ಮಾಡಲು ನಾನು ನಿಜವಾಗಿಯೂ ಎದುರು ನೋಡುತ್ತಿದ್ದೇನೆ ಎಂದು ಬೊಬಾಟ್ ಅವರು ಸಂತಸ ಹಂಚಿಕೊಂಡಿದ್ದಾರೆ.