ಗುವಾಹಟಿ : ನಕಲಿ ನೋಟುಗಳನ್ನು ಹೊಂದಿದ್ದ ನಾಗಾಲ್ಯಾಂಡ್ ಮೂಲದ ದಂಪತಿ ಸೇರಿದಂತೆ ನಾಲ್ವರನ್ನು ಅಸ್ಸಾಂನ ನಾಗಾನ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ.
“ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ, ಪೊಲೀಸರು ಜಿಲ್ಲೆಯ ಕಚುವಾ ಪೊಲೀಸ್ ಠಾಣೆ ವ್ಯಾಪ್ತಿಯ ಸಿಮಾಲುಗುರಿ ಗ್ರಾಮದಲ್ಲಿ ಕಾರ್ಯಾಚರಣೆ ನಡೆಸಿದರು” ಎಂದು ಅಧಿಕಾರಿ ತಿಳಿಸಿದ್ದಾರೆ.
ಆರೋಪಿಗಳಿಂದ ನಕಲಿ ನೋಟು ಮುದ್ರಣ ಯಂತ್ರ ಮತ್ತು ನಕಲಿ ಭಾರತೀಯ ಕರೆನ್ಸಿ ನೋಟುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತ ವ್ಯಕ್ತಿಗಳ ಹೆಸರುಗಳನ್ನು ಪೊಲೀಸರು ಬಹಿರಂಗಪಡಿಸಿಲ್ಲ ಹಾಗೂ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.