ಮಂಗಳೂರು: ದ.ಕ ಜಿಲ್ಲೆಯ ಪುತ್ತೂರು ತಾಲೂಕಿನ ನೆಹರು ನಗರ ಜಂಕ್ಷನ್ ನಲ್ಲಿ ಘಟನೆ ನಡೆದಿದೆ. ಪುತ್ತೂರಿನ ಕಲ್ಲೇಗ ಟೈಲರ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ (26) ಹತ್ಯೆಗೆ ಒಳಗಾದ ವ್ಯಕ್ತಿ.
ಮಾಣಿ ಮೈಸೂರು ಹೆದ್ದಾರಿಯ ನೆಹರು ನಗರ ಜಂಕ್ಷನ್ ನಲ್ಲಿ ಅಟ್ಟಾಡಿಸಿ ಕೊಲೆ ಮಾಡಲಾಗಿದೆ.ಹತ್ಯೆಗೈದ ಬನ್ನೂರು ನಿವಾಸಿ ಮನೀಷ್, ಚೇತು ಪೊಲೀಸ್ ಠಾಣೆಗೆ ಶರಣಾಗಿದ್ದು ಮತ್ತೋರ್ವ ಆರೋಪಿ ತಲೆಮಲೆಸಿಕೊಂಡಿರೋ ಮಾಹಿತಿ ಲಭ್ಯವಾಗಿದೆ.
ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತ ವಿಚಾರದಲ್ಲಿ ಗಲಾಟೆ ನಡೆದಿದ್ದು, ಈ ಸಂದರ್ಭ ಎರಡು ಸಾವಿರ ನೀಡುವ ವಿಚಾರದಲ್ಲಿ ಮಾತುಕತೆ ವಿಕೋಪಕ್ಕೆ ತಿರುಗಿತ್ತು.
ಬಸ್ ಚಾಲಕ ಚೇತು ಎಂಬಾತನ ಬೆಂಬಲಿಗನಿಗೆ ಹಾಗೂ ಅಕ್ಷಯ್ ನಡುವೆ ತೀವ್ರ ವಾಗ್ವಾದ ನಡೆದು ಕೊನೆಗೆ ಅಕ್ಷಯ್ ನನ್ನ ಅಟ್ಟಾಡಿಸಿ ತಲವಾರಿನಿಂದ ಮೂರಕ್ಕೂ ಅಧಿಕ ಮಂದಿಯ ತಂಡದಿಂದ ದಾಳಿ ಮಾಡಲಾಗಿದೆ. ಹುಲಿಕುಣಿತದಲ್ಲಿ ಕಲ್ಲೇಗ ಟೈಗರ್ಸ್ ತಂಡದ ನೇತೃತ್ವವನ್ನು ಅಕ್ಷಯ್ ವಹಿಸಿಕೊಂಡಿದ್ದರು.
ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹತ್ಯೆಗೆ ಬೇರೆ ಕಾರಣಗಳು ಇದೆಯಾ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.