ದಾವಣಗೆರೆ: ಲೋಕಸಭಾ ಚುನಾವಣೆಗೂ ಮುನ್ನ ಲಿಂಗಾಯತ ಸಮುದಾಯದ ಪಂಚಮಸಾಲಿ ಉಪಜಾತಿಗೆ ಮೀಸಲಾತಿ ನೀಡದಿದ್ದರೆ ಬೃಹತ್ ಹೋರಾಟ ನಡೆಸಲಾಗುವುದು ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೀಸಲಾತಿ ಬಗ್ಗೆ ಏನೂ ಮಾಡದ ಸರ್ಕಾರದ ವಿರುದ್ಧ ಪ್ರತಿಭಟನೆಯನ್ನು ಮಾಡಲು ಶುಕ್ರವಾರ ಧಾರ್ಮಿಕ ಕಾರ್ಯಕ್ರಮ ನಡೆಸಲಾಗುವುದು ಎಂದು ಹೇಳಿದರು.
“2 ಎ ಕೋಟಾದಡಿ ಮೀಸಲಾತಿಗಾಗಿ ಆರು ವರ್ಷಗಳಿಂದ ಆಂದೋಲನವನ್ನು ಪ್ರಾರಂಭಿಸಲಾಗಿದೆ. ಹಿಂದಿನ ಬಿಜೆಪಿ ಸರ್ಕಾರ ಸೂಕ್ತ ಕ್ರಮ ಕೈಗೊಂಡಿರಲಿಲ್ಲ. ಈಗ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಸಿದ್ದರಾಮಯ್ಯ ಅವರು ಬೇಡಿಕೆಗೆ ಸ್ಪಂದಿಸುವ ಸಾಧ್ಯತೆ ಕಡಿಮೆ ಮತ್ತು ಮತ್ತೆ ದೊಡ್ಡ ಪ್ರಮಾಣದ ಆಂದೋಲನದ ಅಗತ್ಯವಿದೆ ಎಂದು ಸಮುದಾಯದ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ. ಈ ಕಾರ್ಯಕ್ರಮದಲ್ಲಿ 5,000 ಜನರು ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.
2ಎ ಪ್ರವರ್ಗದಡಿ ಮೀಸಲಾತಿ ನೀಡಲು ವಿಳಂಬವಾಗುತ್ತಿದ್ದರೂ ಲಿಂಗಾಯತರನ್ನು ಒಬಿಸಿ ವರ್ಗಕ್ಕೆ ಸೇರಿಸಬೇಕು ಎಂದು ಅವರು ಮುಖ್ಯಮಂತ್ರಿಗಳನ್ನು ಒತ್ತಾಯಿಸಿದರು.ಪ್ರತಿಭಟನೆಯಲ್ಲಿ ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ, ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಭಾಗವಹಿಸಲಿದ್ದಾರೆ.