ಹೊಸದಿಲ್ಲಿ: ದೇಶದಲ್ಲಿ ಮಾನವ ಕಳ್ಳಸಾಗಣೆ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬುಧವಾರ ಹತ್ತು ರಾಜ್ಯಗಳಲ್ಲಿ ಶೋಧ ನಡೆಸಿದೆ.
ಮಾನವ ಕಳ್ಳಸಾಗಣೆ ಪ್ರಕರಣಗಳಿಗೆ ಸಂಬAಧಿಸಿದAತೆ ತ್ರಿಪುರಾ, ಅಸ್ಸಾಂ, ಪಶ್ಚಿಮ ಬಂಗಾಳ, ಕರ್ನಾಟಕ, ತಮಿಳುನಾಡು, ತೆಲಂಗಾಣ, ಹರಿಯಾಣ, ಪುದುಚೇರಿ, ರಾಜಸ್ಥಾನ ಮತ್ತು ಜಮ್ಮು ಮತ್ತು ಕಾಶ್ಮೀರ ರಾಜ್ಯಗಳಲ್ಲಿ ಏಜೆನ್ಸಿಯ ಅನೇಕ ತಂಡಗಳು ಶೋಧ ನಡೆಸಿವೆ ಎಂದು ಭಯೋತ್ಪಾದನಾ ವಿರೋಧಿ ತನಿಖಾ ಸಂಸ್ಥೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇಂದು ಮುಂಜಾನೆ ಶೋಧ ಕಾರ್ಯ ಆರಂಭವಾಯಿತು. ಈ ವಿಷಯದಲ್ಲಿ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.