ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ.
“ಪುಲ್ವಾಮಾದ ಪರಿಗಾಮ್ ಪ್ರದೇಶದಲ್ಲಿ ಎನ್ಕೌಂಟರ್ ಪ್ರಾರಂಭವಾಗಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಕೆಲಸದಲ್ಲಿ ನಿರತವಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಪ್ರದೇಶದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಪೊಲೀಸ್ ಮತ್ತು ಭದ್ರತಾ ಪಡೆಗಳ ಜಂಟಿ ತಂಡಕ್ಕೆ ಮಾಹಿತಿ ದೊರೆತ ನಂತರ ಗುಂಡಿನ ಚಕಮಕಿ ಪ್ರಾರಂಭವಾಯಿತು.
ಈ ಪ್ರದೇಶವನ್ನು ಸುತ್ತುವರಿದ ನಂತರ, ಅಲ್ಲಿ ಅಡಗಿದ್ದ ಭಯೋತ್ಪಾದಕರು ಗುಂಡು ಹಾರಿಸಲು ಪ್ರಾರಂಭಿಸಿದರು.