ಮಂಗಳೂರು: ಬಿಜೆಪಿ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಪಕ್ಷದ ಕಾರ್ಯಕರ್ತರಲ್ಲಿ ಹೊಸ ಹುರುಪು ಬಂದಿದೆ ಎಂದು ನಿರ್ಗಮಿತ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ಎಲ್ಲದರ ವಿರುದ್ಧ ಹೋರಾಟ ಕೈಗೆತ್ತಿಕೊಂಡು ಪಾರ್ಟಿಯನ್ನು ತಳಮಟ್ಟದಿಂದ ಮತ್ತೆ ಸಂಘಟನೆ ಮಾಡುವ ಶಕ್ತಿ ವಿಜಯೇಂದ್ರಗೆ ಇದೆ. ಜೊತೆಯಾಗಿ ಪಾರ್ಟಿಯನ್ನು ಕಟ್ಟಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ.
ಕಳೆದ ನಾಲ್ಕು ವರ್ಷ ಅವಧಿಯಲ್ಲಿ ರಾಜ್ಯಧ್ಯಕ್ಷನಾಗಿ ತೃಪ್ತಿ ಇದೆ. ಕರಾವಳಿಯಿಂದ ಬಂದವನು ಏನು ರಾಜ್ಯವನ್ನು ಸುತ್ತುತ್ತಾನೆ ಅನ್ನೋದಕ್ಕೆ ಅಪವಾದವಾಗಿ ರಾಜ್ಯ ಸುತ್ತಿ ಸಂಘಟನೆ ಮಾಡಿದ್ದೇನೆ. ಎಲ್ಲಾ ಹಿರಿಯರ ಮಾರ್ಗದರ್ಶನದಲ್ಲಿ ರಾಜ್ಯದ ಜವಾಬ್ದಾರಿಯನ್ನು ನಿಭಾಯಿಸಿದ್ದೇನೆ.
ಕಾಂಗ್ರೆಸ್ ಪಕ್ಷದ ಆಡಳಿತ ವೈಫಲ್ಯಗಳು ಕಂಡುಬರುತ್ತಿವೆ. ಕಳೆದ ಆರು ತಿಂಗಳ ಅವಧಿಯಲ್ಲಿ ಅಭಿವೃದ್ಧಿ ಕಾರ್ಯಗಳು ಆಗಿಲ್ಲ ಭ್ರಷ್ಟಾಚಾರ ತಾಂಡವ ಆಡುತ್ತಿದೆ ಎಂದು ಹೇಳಿದರು.